AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಪಕ್ಕದಲ್ಲಿ ಕುಳಿತಿದ್ದ ಯುವಕನಿಗೆ ಯುವತಿಯಿಂದ 2 ಬಾರಿ ಕಪಾಳಮೋಕ್ಷ; ವಿಡಿಯೋ ವೈರಲ್

IND vs WI: ಪಕ್ಕದಲ್ಲಿ ಕುಳಿತಿದ್ದ ಯುವಕನಿಗೆ ಯುವತಿಯಿಂದ 2 ಬಾರಿ ಕಪಾಳಮೋಕ್ಷ; ವಿಡಿಯೋ ವೈರಲ್

ಪೃಥ್ವಿಶಂಕರ
|

Updated on: Oct 13, 2025 | 6:12 PM

Share

India vs West Indies Test: ಭಾರತ vs ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಸನಿಹದಲ್ಲಿದೆ. ಆದರೆ ಇದೇ ಪಂದ್ಯದಲ್ಲಿ ನಡೆದ ಒಂದು ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿ ಟೆಸ್ಟ್‌ನ ನಾಲ್ಕನೇ ದಿನ ಯುವತಿ ಯುವಕನಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಮಾಷೆಗೆ ಹೊಡೆದಂತೆ ಕಂಡರೂ, ಈ ವಿಡಿಯೋ ಚರ್ಚೆಯ ವಿಷಯವಾಗಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಐದನೇ ದಿನಕ್ಕೆ ಕಾಲಿಟ್ಟಿದೆ. ವಿಂಡೀಸ್ ತಂಡವನ್ನು ಎರಡನೇ ಇನ್ನಿಂಗ್ಸ್​ನಲ್ಲಿ 390 ರನ್​ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾಕ್ಕೆ ಗೆಲ್ಲಲು 121 ರನ್​ಗಳ ಗುರಿ ಸಿಕ್ಕಿದೆ. ಈ ಗುರಿ ಬೆನ್ನಟ್ಟಿರುವ ಭಾರತ ತಂಡಕ್ಕೆ ಐದನೇ ದಿನದಲ್ಲಿ ಗೆಲುವು ಧಕ್ಕವುದು ಖಚಿತವಾಗಿದೆ. ಇದು ಪಂದ್ಯದ ಸಾರಾಂಶವಾದರೆ, ಇನ್ನು ಇದೇ ಪಂದ್ಯದಲ್ಲಿ ನಡೆದ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದರಲ್ಲಿ ಅಕ್ಕಪಕ್ಕದಲ್ಲಿ ಕುಳಿತಿದ್ದ ಯುವಕ ಹಾಗೂ ಯುವತಿ ಕೋಳಿ ಜಗಳವಾಡಿದ್ದಾರೆ. ಇದೇ ವೇಳೆ ಆ ಯುವತಿ, ಯುವಕನಿಗೆ ಎರಡು ಭಾರಿ ಕಪಾಳಮೋಕ್ಷ ಮಾಡಿದ್ದಾಳೆ ಅದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಟೆಸ್ಟ್‌ನ ನಾಲ್ಕನೇ ದಿನದಂದು ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್‌ ಮಾಡುವ ಸಮಯದಲ್ಲಿ ಈ ಘಟನೆ ನಡೆದಿದೆ. ಒಬ್ಬರಿಗೊಬ್ಬರು ಪರಿಚಿತರಂತೆ ಕಾಣುವ ಈ ಯುವಕ ಹಾಗೂ ಯುವತಿ ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದಾರೆ. ಈ ಸಮಯದಲ್ಲಿ ಯುವಕ ಚೇಷ್ಟೇ ಮಾಡಿದ್ದಾನೆಂದು ತೊರುತ್ತದೆ. ಹೀಗಾಗಿ ಪಕ್ಕದಲ್ಲೇ ಕುಳಿತಿದ್ದ ಆ ಯುವತಿ ಆತನ ಕೆನ್ನೆಗೆ ಎರಡು ಬಾರಿ ಹೊಡೆದಿದ್ದಾಳೆ. ಆಕೆ ಯಾವ ಕಾರಣಕ್ಕೆ ಹೊಡೆದಿದ್ದಾಳೆ ಎಂಬುದು ಖಚಿತವಾಗದಿದ್ದರೂ, ತಮಾಷೆಯಾಗಿ ಹೊಡೆದಿದ್ದಾಳೆ ಎಂಬುದನ್ನು ವಿಡಿಯೋ ನೋಡಿ ಅರಿತುಕೊಳ್ಳಬಹುದಾಗಿದೆ.