ಪಾಕ್‌ ವಿರುದ್ಧ ಭಾರತ ಭರ್ಜರಿ ಗೆಲುವು; ಹಾಸನದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿದ ಅಭಿಮಾನಿಗಳು

ಪಾಕ್‌ ವಿರುದ್ಧ ಭಾರತ ಭರ್ಜರಿ ಗೆಲುವು; ಹಾಸನದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿದ ಅಭಿಮಾನಿಗಳು

ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 14, 2023 | 9:42 PM

ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು ಹಿನ್ನೆಲೆ ಹಾಸನದಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಗೆಲುವು ಸಾಧಿಸುತ್ತಲೇ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು, ನಗರದ ಕೆಆರ್ ಪುರಂ ನಲ್ಲಿ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಹಾಸನ, ಅ.14: ವಿಶ್ವಕಪ್ ಟೂರ್ನಿಮೆಂಟ್‌ (World Cup)ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ನಡೆದ  ಕಾದಾಟದಲ್ಲಿ ಭಾರತ  ಭರ್ಜರಿಯಾಗಿ ಗೆಲುವು ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಲೆಂದು ಹಾಸನ(Hassan) ನಗರದ ಬಿ.ಎಂ.ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಕ್ರಿಕೆಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು ಹಿನ್ನೆಲೆ ಹಾಸನದಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಗೆಲುವು ಸಾಧಿಸುತ್ತಲೇ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು, ನಗರದ ಕೆಆರ್ ಪುರಂ ನಲ್ಲಿ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 14, 2023 09:39 PM