ಅಂಧರ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ
T20 Cricket World Cup 2025: ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್‌ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 12 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಅಂಧರ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.
ಅಂಧರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಪಿ ಸಾರಾ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್‌ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 12 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಅಂಧರ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.

