ICC Champions Trophy 2025: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಅದ್ಭುತ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಅವರ 76 ರನ್‌ಗಳ ಅಮೂಲ್ಯ ಇನಿಂಗ್ಸ್ ಮತ್ತು ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಅವರ ಅತ್ಯುತ್ತಮ ಬ್ಯಾಟಿಂಗ್‌ನಿಂದ ಭಾರತ ಗೆಲುವಿನತ್ತ ಸಾಗಿತು. 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.
ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 12 ವರ್ಷಗಳ ನಂತರ ಭಾರತ ಚಾಂಪಿಯನ್ಸ್ ಟ್ರೋಫಿ ಗೆದಿದೆ. ಅಜೇಯವಾಗಿ ಫೈನಲ್ ಪ್ರವೇಶಿಸಿ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಜಯಭೇರಿ ಸಾಧಿಸಿದೆ. ಸದ್ಯ ಕರ್ನಾಟಕದಲ್ಲಿ ಎಲ್ಲೆಡೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ ನೋಡಿ.