IND vs AUS: 3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
Indian Women's Cricket Team Australia Tour 2026: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದು, ಮೂರು ಟಿ20, ಮೂರು ಏಕದಿನ ಹಾಗೂ ಒಂದು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ. ಫೆಬ್ರವರಿ 15 ರಿಂದ ಮಾರ್ಚ್ 9 ರವರೆಗೆ ನಡೆಯುವ ಈ ಪ್ರವಾಸದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸರಣಿಯ ಸಂಪೂರ್ಣ ವೇಳಾಪಟ್ಟಿ ಮತ್ತು ಮೂರು ಸ್ವರೂಪಗಳ ಭಾರತೀಯ ತಂಡದ ವಿವರಗಳು ಲೇಖನದಲ್ಲಿವೆ.
ಒಂದೆಡೆ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್ 6 ರಿಂದ 9 ರವರೆಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದೊಂದಿಗೆ ಅಂತ್ಯವಾಗಲಿದೆ.
ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಆ ಬಳಿಕ ಏಕೈಕ ಟೆಸ್ಟ್ ಪಂದ್ಯ ಮಾರ್ಚ್ 6 ರಿಂದ 9 ರವರೆಗೆ ಪರ್ತ್ ಮೈದಾನದಲ್ಲಿ ನಡೆಯಲಿದೆ.
ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮಾನ್‌ಜೋತ್ ಕೌರ್,ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.
ಏಕದಿನ ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ,ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್),ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್.
ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ಸಿ), ಸ್ಮೃತಿ ಮಂಧಾನ (ವಿಸಿ) , ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಅಮನ್‌ಜೋತ್ ಕೌರ್, ರಿಚಾ ಘೋಷ್ (ಡಬ್ಲ್ಯುಕೆ), ಉಮಾ ಚೆಟ್ರಿ (ಡಬ್ಲ್ಯುಕೆ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಸ್ನೇಹ ರಾಣಾ, ಕ್ರಾಂತಿ ಗೌಡ್, ವೈಷ್ಣವಿ ಶರ್ಮಾ, ಸಯಾಲಿ ಸತ್ಘರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ

