4,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಆರ್​ಸಿಬಿ ಆಲ್‌ರೌಂಡರ್

Updated on: Dec 30, 2025 | 9:05 PM

Arundhati Reddy batting: ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 175 ರನ್ ಗಳಿಸಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅರುಂಧತಿ ರೆಡ್ಡಿ ಕೇವಲ 11 ಎಸೆತಗಳಲ್ಲಿ ಅಜೇಯ 27 ರನ್ ಸಿಡಿಸಿ ಮಿಂಚಿದರು. ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು.

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ ಅದ್ಭುತ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಬಂದ ಅರುಂಧತಿ ರೆಡ್ಡಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 27 ರನ್ ಬಾರಿಸಿದರು.

ಅಮನ್‌ಜೋತ್ ಕೌರ್ ಔಟಾದ ಬಳಿಕ ಕ್ರೀಸ್​ಗೆ ಬಂದ ಅರುಂಧತಿ ರೆಡ್ಡಿ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಈ ಓವರ್​ನಲ್ಲಿ 5 ಎಸೆತಗಳನ್ನು ಎದುರಿಸಿದ ಅರುಂಧತಿ ಒಟ್ಟು 19 ರನ್​ಗಳನ್ನು ಕಲೆಹಾಕಿದರು. ಈ ಓವರ್​ನಲ್ಲಿ ಅವರು ಮೂರು ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ಬಾರಿಸಿ ತಂಡವನ್ನು 175 ರನ್​ಗಳಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.