ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್ ಗೆದ್ದ ಟೀಮ್ ಇಂಡಿಯಾ
India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 96 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 41 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡ 52 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಮೂರು ಮ್ಯಾಚ್ಗಳು ಕಾರಣಾಂತರದಿಂದ ರದ್ದಾಗಿದ್ದವು.
ಬರೋಬ್ಬರಿ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ನಲ್ಲಿ ಟಾಸ್ ಗೆದ್ದಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದಿದ್ದಾರೆ. ಈ ಮೂಲಕ 20 ಪಂದ್ಯಗಳ ಸುದೀರ್ಘ ಟಾಸ್ ಫೇಲ್ಗೆ ಬ್ರೇಕ್ ಹಾಕಿದ್ದಾರೆ.
ಇದಕ್ಕೂ ಮುನ್ನ ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ನವೆಂಬರ್ 15, 2023 ರಲ್ಲಿ. ಅದು ಕೂಡ 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ. ಅಂದು ನ್ಯೂಝಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರು. ಇದಾದ ಬಳಿಕ ಭಾರತ ತಂಡವು ಬರೋಬ್ಬರಿ 20 ಏಕದಿನ ಪಂದ್ಯಗಳನ್ನಾಡಿದೆ.
ಈ ಇಪ್ಪತ್ತು ಮ್ಯಾಚ್ಗಳಲ್ಲೂ ಭಾರತ ತಂಡ ಟಾಸ್ ಸೋತಿತ್ತು. ಇದೀಗ 21ನೇ ಪಂದ್ಯದಲ್ಲಿ ಕೆಎಲ್ ರಾಹುಲ್ಗೆ ಅದೃಷ್ಟ ಖುಲಾಯಿಸಿದೆ. ಅದರಂತೆ ಇದೀಗ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಸೌತ್ ಆಫ್ರಿಕಾ ಪ್ಲೇಯಿಂಗ್ XI: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಲುಂಗಿ ಎನ್ಗಿಡಿ, ಕೇಶವ್ ಮಹಾರಾಜ್, ಒಟ್ನೀಲ್ ಬಾರ್ಟ್‌ಮ್ಯಾನ್.