ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎರಡನೇ ಬಾರಿ ಪರೀಕ್ಷಾರ್ಥ ಹಾರಾಟ ನಡೆಸಿದ ಭಾರತೀಯ ವಾಯುಸೇನೆ ವಿಮಾನ

ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2023 | 6:31 PM

ಭಾರತೀಯ ವಾಯು ಸೇನೆಯ ಭಾರಿ ಗಾತ್ರದ ವಿಮಾನವೊಂದು ಇಂದು ಪರೀಕ್ಷಾರ್ಥ ಹಾರಾಟ, ಲ್ಯಾಂಡಿಂಗ್ ಮತ್ತು ಟೇಕಾಫ್ ಪ್ರಯೋಗಗಳನ್ನು ನಡೆಸಿತು.

ಶಿವಮೊಗ್ಗ: ನಗರದಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣ (airport) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ನಾವು ಈಗಾಗಲೇ ವರದಿ ಮಾಡಿರುವಂತೆ ಸೋಮವಾರದಂದು ಏರ್ಪೋರ್ಟ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯು ಸೇನೆಯ ಭಾರಿ ಗಾತ್ರದ ವಿಮಾನವೊಂದು ಇಂದು ಪರೀಕ್ಷಾರ್ಥ ಹಾರಾಟ, ಲ್ಯಾಂಡಿಂಗ್ (landing) ಮತ್ತು ಟೇಕಾಫ್ (takeoff) ಪ್ರಯೋಗಗಳನ್ನು ನಡೆಸಿತು. ಬೋಯಿಂಗ್ ವಿಮಾನದಂತೆ ಕಾಣುವ ಐಎಎಫ್ ವಿಮಾನವು ನಿಲ್ದಾಣದಲ್ಲಿ ಲ್ಯಾಂಡ್ ಆಗಿ ರನ್ ವೇ ನಲ್ಲಿ ಓಡುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.