India-Pakistan War Updates; ಬೆಳಗಿನ ಹೊತ್ತಲ್ಲೇ ರಜೌರಿ ಬಳಿಯ ಪಾಕಿಸ್ತಾನಿ ಪೋಸ್ಟ್​ಗಳು ಭಾರತೀಯ ಸೇನೆಯಿಂದ ಧ್ವಂಸ!

ಅರುಣ್​ ಕುಮಾರ್​ ಬೆಳ್ಳಿ

Updated on: May 09, 2025 | 5:32 PM

ಟಿವಿ9 ಜೊತೆ ಮಾತಾಡಿರುವ ಯುವಾ ಬ್ರಿಗೇಡ್ ಸಂಸ್ಥಾಪಕ ಮತ್ತು ಚಿಂತಕ ಚಕ್ರವರ್ತಿ ಸೂಲಿಬೆಲೆ, ಪಾಕಿಸ್ತಾನದ ಮೇಲೆ ಆಕ್ರಮಣ ನಡೆಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಿಂದ ತಯಾರಿ ಮಾಡಿಕೊಳ್ಳುತ್ತಿದ್ದರು, ರಫೇಲ್ ಯುದ್ಧ ವಿಮಾನ ಖರೀದಿ, ಎಸ್-400 ಏರ್ ಡಿಫೆನ್ಸ್ ಸಾಧನ ಅಳವಡಿಕೆ ಮೊದಲಾದವುಗಳನ್ನೆಲ್ಲ ತಯಾರಿ ಮಾಡಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಿದರು.

ಬೆಂಗಳೂರು, ಮೇ 9: ನಾವೆಲ್ಲ ಮನೆಗಳಲ್ಲಿ ಬೆಚ್ಚಗೆ ಮಲಗಿರಬೇಕಾದರೆ, ನಮ್ಮ ಸೇನೆ ಗಡಿಭಾಗದಲ್ಲಿ ಪಾಕಿಸ್ತಾನಿ ಸೇನೆಯನ್ನು, ಉಗ್ರರನ್ನು ಬಗ್ಗು ಬಡಿಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್​​ನಲ್ಲಿ ಇಂದು ಬೆಳಗ್ಗೆ 5.44 ನಿಮಿಷಕ್ಕೆ ಸೇನೆಯು ಪಾಕಿಸ್ತಾನದ ಪೋಸ್ಟ್ ಗಳನ್ನು ಧ್ವಂಸ ಮಾಡಿದೆ. ಪಾಕ್ ಸೇನೆ ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದಾಗ ಭಾರತೀಯ ಸೇನೆ ದಾಳಿ ನಡೆಸಿದೆ. ಗಡಿಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿರುವುದರಿಂದ ಅಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತವಾದ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಭಾರತದ ಏರ್ಪೋರ್ಟ್ ಮತ್ತು ಸ್ಮಾರಕಗಳನ್ನು ಸಂರಕ್ಷಿಸುವ ಕಡೆಯೂ ಭಾರತ ಹೆಚ್ಚಿನ ಗಮನ ನೀಡುತ್ತಿದೆ. ಪಾಕಿಸ್ತಾನದ ಸಂಸತ್ತಿನಲ್ಲಿ ಚುನಾಯಿತ ಸದಸ್ಯರು ಶಹಬಾಜ್ ಶರೀಫ್ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ.

ಇದನ್ನೂ ಓದಿ:  12 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.