Live: ಆಪರೇಷನ್ ಸಿಂದೂರ್, ಡಿಜಿಎಂಒ ಸುದ್ದಿಗೋಷ್ಠಿ
ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಪ್ರಬಲ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ನೀಡಿದ್ದಾರೆ. ನೌಕಾಪಡೆ ಮತ್ತು ವಾಯುಪಡೆ ಅಧಿಕಾರಿಗಳು ಈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಜಮ್ಮು ಮತ್ತು ಕಾಶ್ಮೀರದಲ್ಲಿನ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನಕ್ಕೆ ಕಳೆದ ರಾತ್ರಿ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವ ಹಾಗೆ ಪೆಟ್ಟು ನೀಡಿದೆ. ಈ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನೌಕಾಪಡೆ, ವಾಯುಪಡೆ ಅಧಿಕಾರಿಗಳು ಉಪಸ್ಥಿತರಿದ್ದಾರೆ. ನೇರಪ್ರಸಾರ ಇಲ್ಲಿದೆ.
Published on: May 11, 2025 06:37 PM
