ತವರಿಗೆ ಮರಳಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಸಿಎಂ ಯೋಗಿ ಆದಿತ್ಯನಾಥ್ ಸನ್ಮಾನ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಆಕ್ಸಿಯಂ ಮಿಷನ್ ಅನ್ನು ಯಶಸ್ವಿಗೊಳಿಸಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ತಮ್ಮ ತವರು ಲಕ್ನೋಗೆ ಆಗಮಿಸಿದ್ದಾರೆ. ಈ ವೇಳೆ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಸನ್ಮಾನಿಸಿದರು. ಇದಕ್ಕೂ ಮೊದಲು ತೆರೆದ ವಾಹನದಲ್ಲಿ ಶುಭಾಂಶು ಮೆರವಣಿಗೆ ನಡೆಸಿದರು. ಅವರನ್ನು ಸ್ವಾಗತಿಸಲು ಸಾವಿರಾರು ಜನರು ಸೇರಿದ್ದರು.
ಲಕ್ನೋ, ಆಗಸ್ಟ್ 25: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಇಂದು (ಸೋಮವಾರ) ಲಕ್ನೋಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೃತ್ಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಯಶಸ್ವಿಯಾಗಿ ಆಕ್ಸಿಯಂ ಮಿಷನ್ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಮೊದಲ ಬಾರಿಗೆ ಶುಭಾಂಶು ಶುಕ್ಲಾ ತಮ್ಮ ಕುಟುಂಬದೊಂದಿಗೆ ತಮ್ಮ ಊರಾದ ಲಕ್ನೋಗೆ ಆಗಮಿಸಿದ್ದಾರೆ. ಬಾಹ್ಯಾಕಾಶ ಪರಿಶೋಧನೆಯಲ್ಲಿ ಶುಕ್ಲಾ ಅವರ ಅಸಾಧಾರಣ ಸಾಧನೆ ಲಕ್ನೋ ಮತ್ತು ಭಾರತ ದೇಶ ಎರಡಕ್ಕೂ ಹೆಮ್ಮೆಯ ಕ್ಷಣವಾಗಿತ್ತು. ಭಾರತದ ಬೆಳೆಯುತ್ತಿರುವ ಬಾಹ್ಯಾಕಾಶ ಉಪಸ್ಥಿತಿಗೆ ಶುಭಾಂಶು ಅವರ ಕೊಡುಗೆಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಶ್ಲಾಘಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

