SA vs IND 1st Test: ಬಾಕ್ಸಿಂಗ್ ಡೇ ಟೆಸ್ಟ್​ಗೆ ಭಾರತ ರೆಡಿ: ಬಿಸಿಸಿಐ ಹಂಚಿಕೊಂಡಿದೆ ವಿಡಿಯೋ

Updated on: Dec 25, 2023 | 11:47 AM

Team India Practice: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಬ್ಯಾಟರ್‌ಗಳು ಸಜ್ಜಾಗುತ್ತಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ಗು ಮುನ್ನ ಬಿಸಿಸಿಐ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಸೇರಿದಂತೆ ಎಲ್ಲ ಪ್ಲೇಯರ್ಸ್ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಟೀಮ್ ಇಂಡಿಯಾ ಬ್ಯಾಟರ್‌ಗಳು ಆಫ್ರಿಕಾದ ಸವಾಲಿಗೆ ಸಜ್ಜಾಗುತ್ತಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ಗು ಮುನ್ನ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಜೊತೆಗೆ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರು ನೆಟ್ಸ್‌ನಲ್ಲಿ ಶ್ರಮಿಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಆಫ್ರಿಕಾ ನೆಲದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿ ಜಯಿಸಿಲ್ಲ. ಈ ಬಾರಿ ಟೀಮ್ ಇಂಡಿಯಾ ಯುವ ಪಡೆ ಇತಿಹಾಸ ಸೃಷ್ಟಿಸುತ್ತಾ ನೋಡಬೇಕು.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 25, 2023 11:46 AM
Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More