ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡವನ್ನು ಭೇಟಿಯಾದ ಪ್ರಧಾನಿ ಮೋದಿ

Updated on: Nov 27, 2025 | 7:14 PM

PM Modi Meets Blind T20 World Cup Champs: ಚೊಚ್ಚಲ ಅಂಧರ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡವನ್ನು ಪ್ರಧಾನಿ ಮೋದಿ ದೆಹಲಿಯಲ್ಲಿ ಭೇಟಿಯಾದರು. ಕೊಲಂಬೊದಲ್ಲಿ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಭಾರತ ಇತಿಹಾಸ ಸೃಷ್ಟಿಸಿತು. ಆಟಗಾರ್ತಿಯರು ಮತ್ತು ಸಿಬ್ಬಂದಿ ಜೊತೆ ಪ್ರಧಾನಿ ಸಂವಾದ ನಡೆಸಿದರು, ಅವರ ವಿಶಿಷ್ಟ ಗೆಲುವಿನ ಅನುಭವಗಳನ್ನು ಕೇಳಿದರು. ಇದು ದೇಶಕ್ಕೆ ಹೆಮ್ಮೆಯ ಕ್ಷಣ.

ಚೊಚ್ಚಲ ಆವೃತ್ತಿಯ ಅಂಧರ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ದೆಹಲಿಯಲ್ಲಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಮಹಿಳಾ ಆಟಗಾರ್ತಿಯರು ಮತ್ತು ಸಿಬ್ಬಂದಿ ಪ್ರಧಾನಿ ಮೋದಿ ಮತ್ತು ಟ್ರೋಫಿಯೊಂದಿಗೆ ಫೋಟೋಗಳಿಗೆ ಪೋಸ್ ನೀಡಿದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಆಟಗಾರ್ತಿಯರೊಂದಿಗೆ ಮಾತನಾಡಿ ಅವರ ಅನುಭವಗಳ ಬಗ್ಗೆ ತಿಳಿದುಕೊಂಡರು.

ಕೊಲಂಬೊದ ಪಿ. ಸಾರಾ ಓವಲ್‌ನಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇದೇ ಮೊದಲ ಬಾರಿಗೆ ನಡೆದ ಈ ಟೂರ್ನಮೆಂಟ್ ಅನ್ನು ಗೆಲ್ಲುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡ ಐದು ವಿಕೆಟ್‌ಗಳಿಗೆ 114 ರನ್‌ ಕಲೆಹಾಕಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಭಾರತ ತಂಡವು 12 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 117 ರನ್‌ಗಳನ್ನು ಗಳಿಸುವ ಮೂಲಕ ಜಯದ ನಗೆ ಬೀರಿತು.