ಲತಾ ಮಂಗೇಶ್ಕರ್ ಧ್ವನಿಯಲ್ಲಿ ಎಐ-ರಚಿಸಿದ ‘ರಾಮ್ ಆಯೇಂಗೆ’ ಹಾಡು ಫುಲ್ ವೈರಲ್

Updated on: Jan 22, 2024 | 12:21 PM

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಧ್ವನಿಯಲ್ಲಿ "ರಾಮ್ ಆಯೇಂಗೆ" ಹಾಡನ್ನು ರಚಿಸಲು ರಚನೆಕಾರರು AI ಪರಿಕರಗಳನ್ನು ಬಳಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ರಾಷ್ಟ್ರವು ತಯಾರಿ ನಡೆಸುತ್ತಿರುವ ಮಧ್ಯೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ (Ram Mandir) ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಇಡೀ ಭಾರತವೇ ಕಣ್ತುಂಬಿಕೊಳ್ಳುತ್ತಿದೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ಕೆಲವು ದೊಡ್ಡ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಸಮಾರಂಭಕ್ಕೆ 1000 ಕ್ಕೂ ಹೆಚ್ಚು ಜನರು ಆಗಮಿಸುತ್ತಿದ್ದಾರೆ. ಇದರ ನಡುವೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಧ್ವನಿಯಲ್ಲಿ “ರಾಮ್ ಆಯೇಂಗೆ” ಹಾಡನ್ನು ರಚಿಸಲು ರಚನೆಕಾರರು AI ಪರಿಕರಗಳನ್ನು ಬಳಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ರಾಷ್ಟ್ರವು ತಯಾರಿ ನಡೆಸುತ್ತಿರುವ ಮಧ್ಯೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಹಾಡನ್ನು ಕೇಳಿದ ಅನೇಕರು ಲತಾ ಮಂಗೇಶ್ಕರ್ ಎಐ ಧ್ವನಿಗೆ ಭಾವುಕರಾದರು. “ಲತಾ ದೀದಿಯವರ ಧ್ವನಿಯಲ್ಲಿ ಈ ಸುಂದರವಾದ ಹಾಡನ್ನು ಕೇಳುವುದು ಅದ್ಭುತವಾಗಿದೆ, ನೀವು ಅದ್ಭುತವನ್ನು ಮಾಡಿದ್ದೀರಿ ಎಂದು ಒಬ್ಬರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More