ಅಲ್ಲೇ ಡ್ರಾ ಅಲ್ಲೇ ಬಹುಮಾನ: ಪಾಕ್ ಸ್ಪಿನ್ನರ್ಗೆ ಟೀಮ್ ಇಂಡಿಯಾ ಆಟಗಾರರ ತಿರುಗೇಟು
India vs Pakistan Asia Cup 2025: ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್ಗಳಲ್ಲಿ 146 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 9ನೇ ಬಾರಿ ಏಷ್ಯನ್ ಚಾಂಪಿಯನ್ ಎನಿಸಿಕೊಂಡಿದೆ.
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡಿ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಹೋಯ್ತ ಇರು ಎಂಬಾರ್ಥದಲ್ಲಿ ಕಣ್ಸನ್ನೆ ಸೆಲೆಬ್ರೇಷನ್ ಮಾಡಿದ್ದರು. ಈ ಸೆಲೆಬ್ರೇಷನ್ಗೆ ಇದೀಗ ಟೀಮ್ ಇಂಡಿಯಾ ಆಟಗಾರರು ತಿರುಗೇಟು ನೀಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಪಾಕ್ ತಂಡವನ್ನು ಬಗ್ಗು ಬಡಿದ ಬಳಿಕ ಟೀಮ್ ಇಂಡಿಯಾ ಆಟಗಾರರಾದ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಹಾಗೂ ಜಿತೇಶ್ ಶರ್ಮಾ ಹೋಯ್ತಾ ಇರು ಎಂದು ಸನ್ನೆ ಮಾಡುವ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಇದು ಯಾರಿಗೆ ತಿರುಗೇಟು ಎಂಬುದನ್ನು ತೋರಿಸಲು ಸಂಜು ಸ್ಯಾಮ್ಸನ್ ಅವರನ್ನು ಮುಂದೆ ನಿಲ್ಲಿಸಲಾಗಿತ್ತು. ಇದೀಗ ಟೀಮ್ ಇಂಡಿಯಾ ಆಟಗಾರರ ಈ ತಿರುಗೇಟಿನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್ಗಳಲ್ಲಿ 146 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 9ನೇ ಬಾರಿ ಏಷ್ಯನ್ ಚಾಂಪಿಯನ್ ಎನಿಸಿಕೊಂಡಿದೆ.
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ

