ಮಾಜಿ ಕ್ರಿಕೆಟಿಗರಿಗೂ ಅಕ್ರಮ ಹಣ ವರ್ಗಾವಣೆ ಗುಮ್ಮ: ಉತ್ತಪ್ಪ, ಯುವರಾಜ್ ಸಿಂಗ್ಗೆ ಇಡಿ ಶಾಕ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ರಾಬಿನ್ ಉತ್ತಪ್ಪ ಹಾಗೂ ಯುವರಾಜ್ ಸಿಂಗ್ ಅವರಿಗೂ ಸಮನ್ಸ್ ಜಾರಿ ಮಾಡಿದೆ. ರಾಬಿನ್‌ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22ರಂದು ಹಾಗೂ ಸೆ.23ರಂದು ಯುವರಾಜ್‌ಸಿಂಗ್ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸಮನ್ಸ್ ನೀಡಿದೆ. ಹಲವಾರು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರಿಗೂ ಸಮನ್ಸ್ ಜಾರಿ ಮಾಡಲಾಗಿದೆ.
ನವದೆಹಲಿ, (ಸೆಪ್ಟೆಂಬರ್ 16): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ರಾಬಿನ್ ಉತ್ತಪ್ಪ ಹಾಗೂ ಯುವರಾಜ್ ಸಿಂಗ್ ಅವರಿಗೂ ಸಮನ್ಸ್ ಜಾರಿ ಮಾಡಿದೆ. ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22ರಂದು ವಿಚಾರಣೆ ಹಾಜರಾಗುವಂತೆ ಇಡಿ ಸೂಚಿನೆ ನೀಡಿದ್ದರೆ, ಸೆ.23ರಂದು ಯುವರಾಜ್‌ಸಿಂಗ್ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸಮನ್ಸ್ ನೀಡಿದೆ. ಹಲವಾರು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರಿಗೂ ಸಮನ್ಸ್ ಜಾರಿ ಮಾಡಲಾಗಿದೆ.
1 ಎಕ್ಸ್ ಬೆಟ್ ಹೆಸರಿನ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಉತ್ತಪ್ಪ ಅವರನ್ನು ಹಣದ ಅಕ್ರಮ ವರ್ಗಾವಣೆ(ಪಿಎಂಎಲ್ ಎ) ಅಡಿಯಲ್ಲಿ ಹೇಳಿಕೆ ದಾಖಲಿಸುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಸೆಪ್ಟೆಂಬರ್ 22ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಉತ್ತಪ್ಪ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆ ಸಮನ್ಸ್ ಜಾರಿಯಾದ ಮೂರನೇ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಇದಕ್ಕೂ ಮೊದಲು ಇಡಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನ್ಆ ಹಾಗೂ ಶಿಖರ್ ಧವನ್ ಗೂ ಇಡಿ ಸಮನ್ಸ್ ನೀಡಿತ್ತು.
