ಸ್ವದೇಶಿ ಉತ್ಪನ್ನ ಬಳಸಿ; ಜೋಹೋ ಬಳಸುವ ಮೂಲಕ ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರ ಸ್ವದೇಶಿ ಕರೆಗೆ ಎಲ್ಲರೂ ಸೇರಬೇಕೆಂದು ನಾನು ಕೋರುತ್ತೇನೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದ ಜನರಿಗೆ ಬರೆದ ಪತ್ರದಲ್ಲಿ ಹಬ್ಬದ ಸಮಯದಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಬೆಂಬಲಿಸುವಂತೆ ನಾಗರಿಕರನ್ನು ಒತ್ತಾಯಿಸಿದ ನಂತರ ಈ ಮನವಿ ಬಂದಿದೆ.
ನವದೆಹಲಿ, ಸೆಪ್ಟೆಂಬರ್ 22: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ದಾಖಲೆಗಳು, ಸ್ಪ್ರೆಡ್‌ಶೀಟ್‌ಗಳು ಮತ್ತು ಪ್ರೆಸೆಂಟೇಷನ್ಗೆ ಸ್ವದೇಶಿ ವೇದಿಕೆಯಾದ ಜೊಹೊ ಬಳಸಲಿದ್ದೇನೆ ಎಂದು ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ನಲ್ಲಿ ಈ ಬಗ್ಗೆ ಅಪ್ಡೇಟ್ ಹಂಚಿಕೊಂಡ ಅವರು, ಸ್ವದೇಶಿ ಉತ್ಪನ್ನಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವದೇಶಿ ಕರೆಗೆ ಸೇರಬೇಕೆಂದು ಜನರಿಗೆ ಮನವಿ ಮಾಡಿದ್ದಾರೆ. “ನಾನು ದಾಖಲೆಗಳು, ಸ್ಪ್ರೆಡ್‌ಶೀಟ್‌ಗಳು ಮತ್ತು ಪ್ರೆಸೆಂಟೇಷನ್ನಿಗಾಗಿ ನಮ್ಮದೇ ಆದ ಸ್ವದೇಶಿ ವೇದಿಕೆಯಾದ ಜೊಹೊಗೆ ತೆರಳುತ್ತಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ. “ಸ್ವದೇಶಿ ಉತ್ಪನ್ನಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವದೇಶಿ ಕರೆಗೆ ಎಲ್ಲರೂ ಸೇರಬೇಕೆಂದು ನಾನು ಕೋರುತ್ತೇನೆ” ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

