‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ

Updated on: Sep 22, 2025 | 8:17 PM

ಕನ್ನಡ ಚಿತ್ರರಂಗದ ಪಾಲಿಗೆ ‘ಕಾಂತಾರ’ ಒಂದು ಹೆಮ್ಮೆಯ ಚಿತ್ರ. ಈಗ ಅದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಭಾರತೀಯ ಅಂಚೆ ಇಲಾಖೆಯಿಂದ ಗೌರವ ಸಲ್ಲಿಸಲಾಗಿದೆ. ಈ ಮೊದಲು ಕಾಂತಾರ ಸಿನಿಮಾಗೆ ‘ರಾಷ್ಟ್ರ ಪ್ರಶಸ್ತಿ’ ಬಂದಿತ್ತು. ಈಗ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಲಾಗಿದೆ.

ಕನ್ನಡ ಚಿತ್ರರಂಗದ ಪಾಲಿಗೆ ‘ಕಾಂತಾರ’ ಒಂದು ಹೆಮ್ಮೆಯ ಸಿನಿಮಾ. ಈಗ ಅದರ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಭಾರತೀಯ ಅಂಚೆ (Indian Post) ಇಲಾಖೆಯಿಂದ ಗೌರವ ಸಲ್ಲಿಸಲಾಗಿದೆ. ಈ ಮೊದಲು ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈಗ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುವ ಮೂಲಕ ಗೌರವ ನೀಡಲಾಗಿದೆ. ಅಂಚೆ ಇಲಾಖೆಯ ಸಂದೇಶ್ ಮಹದೇವಪ್ಪ, ಹೆಚ್​​.ಎಂ. ಮಹೇಶ್ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಸುದ್ದಿಗೋಷ್ಠಿಗೆ ಬಂದು ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ ಮಾಡಿದರು. ಈ ವೇಳೆ ನಿರ್ಮಾಪಕ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ (Rishab Shetty) ಭಾಗಿಯಾದರು. ‘ಕಾಯಕವೇ ಕೈಲಾಸ’ ಎಂದು ರಿಷಬ್ ಶೆಟ್ಟಿ ಅವರು ಪೋಸ್ಟ್ ಕಾರ್ಡ್​ ಮೇಲೆ ಆಟೋಗ್ರಾಫ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.