Rupee value: ರೂಪಾಯಿಗೆ ಬಿಗ್ ಶಾಕ್, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93ರ ಗಡಿ ದಾಟಿದ ಭಾರತೀಯ ಕರೆನ್ಸಿ ಮೌಲ್ಯ!

Updated on: Mar 20, 2026 | 12:26 PM

ಭಾರತೀಯ ರೂಪಾಯಿ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿದ್ದು, ಡಾಲರ್ ಎದುರು ಸಾರ್ವಕಾಲಿಕ ಇಳಿಕೆಯೊಂದಿಗೆ 93 ರ ಗಡಿ ದಾಟಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತ ಮತ್ತು ತೈಲ ಬೆಲೆ ಏರಿಕೆ ಭೀತಿಯ ನಡುವೆ ರೂಪಾಯಿ ಕುಸಿತವಾಗುತ್ತಿದ್ದು, ಇದು ಸಾಮಾನ್ಯ ಜನರ ಜೇಬಿನ ಮೇಲೆ ಹೇಗೆ ಪರಿಣಾಮ ಬೀರಲಿದೆ? ಇಲ್ಲಿದೆ ಸಂಪೂರ್ಣ ವಿವರ.

ನವದೆಹಲಿ, ಮಾರ್ಚ್ 20: ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಸದ್ಯಕ್ಕೆ ರೂಪಾಯಿ ಮೌಲ್ಯ 93.19 ಕ್ಕೆ ಕುಸಿದಿದೆ. ಕಚ್ಚಾತೈಲ ಬೆಲೆ ಏರಿಕೆ ಮತ್ತು ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿ ಈ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 110 ಡಾಲರ್ ದಾಟಿದ್ದು, ಭಾರತ ತನ್ನ ತೈಲದ ಶೇ 80ರಷ್ಟನ್ನು ಆಮದು ಮಾಡಿಕೊಳ್ಳುವುದರಿಂದ ಹೆಚ್ಚು ಡಾಲರ್‌ಗಳನ್ನು ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಯುದ್ಧದ ಭೀತಿಯಿಂದ ವಿದೇಶಿ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯಿಂದ ಹಣ ಹಿಂಪಡೆದು ಡಾಲರ್‌ಗಳಲ್ಲಿ ಹೂಡಿಕೆ ಮಾಡುತ್ತಿರುವುದೂ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

ಈ ಕುಸಿತದಿಂದಾಗಿ ಪೆಟ್ರೋಲ್, ಡೀಸೆಲ್, ಮೊಬೈಲ್, ಲ್ಯಾಪ್‌ಟಾಪ್ ಮತ್ತು ಖಾದ್ಯ ತೈಲಗಳಂತಹ ಆಮದು ವಸ್ತುಗಳ ಬೆಲೆ ಏರಿಕೆಯಾಗಲಿದೆ. ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ವೆಚ್ಚ ಹೆಚ್ಚಾಗಲಿದೆ. ಹಣದುಬ್ಬರ ಮತ್ತು ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರಲಿದೆ. ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವುದನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಿದೇಶಿ ವಿನಿಮಯ ಮೀಸಲು ನಿಧಿಯಿಂದ ಡಾಲರ್‌ಗಳನ್ನು ಮಾರಾಟ ಮಾಡುವ ಸಾಧ್ಯತೆಯೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More