ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Updated on: Feb 20, 2026 | 2:55 PM

ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್​​ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. 'ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ' ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್​​ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. ‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 20, 2026 02:51 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More