ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ; ನೆಟ್ಟಿಗರಿಂದ ತೀವ್ರ ಆಕ್ರೋಶ

Updated on: May 30, 2025 | 8:30 PM

ಪಾಕಿಸ್ತಾನಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹಾಗೂ ಉಮರ್ ಗುಲ್ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ ದುಬೈನಲ್ಲಿರುವ ಕೇರಳ ಸಮುದಾಯದವರನ್ನು ನೆಟಿಜನ್‌ಗಳು ಟೀಕಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಪಾಕಿಸ್ತಾನದ ಮಾಜಿ ನಾಯಕ ಭಾರತದ ವಿರುದ್ಧ ವಿಷಕಾರಿ ನಿಲುವು ತಳೆದ ಹಿನ್ನೆಲೆಯಲ್ಲಿ ಈ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

ನವದೆಹಲಿ, ಮೇ 30: ಪಾಕಿಸ್ತಾನದ (Pakistan) ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹಾಗೂ ಉಮರ್ ಗುಲ್ ಅವರನ್ನು ದುಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇರಳ ಸಮುದಾಯದವರು ವೈಭವದಿಂದ ಸ್ವಾಗತಿಸಿದ್ದು, ಈ ಘಟನೆಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಭಾರತದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು. ತಮ್ಮ ಗಡಿಯನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗದೆ ಭಾರತ ಪಾಕಿಸ್ತಾನದ ಮೇಲೆ ಆರೋಪ ಮಾಡುತ್ತಿದೆ ಎಂದಿದ್ದರು. ಅದರ ನಡುವೆಯೇ ಕೇರಳ ಸಮುದಾಯದವರು ಪಂಚೆಯುಟ್ಟು ಶಾಹಿದಿ ಅಫ್ರಿದಿಯನ್ನು ಮೆರೆಸಿ, ಅವರಿಗೆ ಅದ್ದೂರಿ ಸ್ವಾಗತ ನೀಡಿರುವುದನ್ನು ಟೀಕಿಸಿದ ನೆಟ್ಟಿಗರು ಇದು ನಾಚಿಕೆಗೇಡಿನ ಕೆಲಸ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ