AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ

ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:May 07, 2025 | 6:27 PM

Share

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕಾವಲು ಪಡೆ ಮತ್ತು ಪೊಲೀಸರು ಅರಬ್ಬೀ ಸಮುದ್ರದಲ್ಲಿ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಮೀನುಗಾರಿಕಾ ಬೋಟ್‌ಗಳು ಮತ್ತು ಮೀನುಗಾರರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸುರಕ್ಷತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ.

ಮಂಗಳೂರು, ಮೇ 07: ಜಮ್ಮು ಕಾಶ್ಮೀರ ಪಹೆಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿದ​ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾವಲು ಪಡೆ ಪೊಲೀಸರು ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸಿದಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್, ಮೀನುಗಾರರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಪೊಲೀಸರು ಮೀನುಗಾರರ ದಾಖಲೆಗಳನ್ನ ತಪಾಸಣೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ.

Published on: May 07, 2025 03:48 PM

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More