ಆಪರೇಷನ್ ಸಿಂಧೂರ್: ಭಾರತ ವಿವೇಕಯುತದಿಂದ ದಿಟ್ಟ ಹೆಜ್ಜೆ ಇಟ್ಟಿದೆ, ರವಿಶಂಕರ್ ಗುರೂಜಿ
ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಕುರಿತು ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಗ್ರವಾದವನ್ನು ಬೇರು ಸಮೇತ ಕಿತ್ತೆಸೆಯುವ ಅವಶ್ಯಕತೆಯನ್ನು ಅವರು ಒತ್ತಿ ಹೇಳಿದ್ದಾರೆ. ಭಾರತದ ಈ ದಿಟ್ಟ ಹೆಜ್ಜೆಯನ್ನು ಅವರು ಸ್ವಾಗತಿಸಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸರಿಯಾದ ನಿರ್ಣಯ ಕೈಗೊಳ್ಳುತ್ತಿದೆ ಎಂದೂ ಅವರು ಹೇಳಿದ್ದಾರೆ.
ಮಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ದಾಳಿ ಮಾಡಿದೆ. ಈ ವಿಚಾರವಾಗಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ (Ravishankar Guruji) ಮಾತನಾಡಿ. “ಉಗ್ರವಾದ ಮನುಕುಲದ ವಿರುದ್ಧವಾಗಿದೆ. ಉಗ್ರವಾದವನ್ನು ಬೇರುಸಮೇತ ಕಿತ್ತೆಸೆಯಬೇಕು. ಈ ಸಂದರ್ಭದಲ್ಲಿ ಭಾರತ ವಿವೇಕಯುತದಿಂದ ದಿಟ್ಟ ಹೆಜ್ಜೆ ಇಟ್ಟಿದೆ. ಕೇವಲ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದ್ದು, ಸರಿಯಾಗಿದೆ. ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಭಾರತೀಯರು ಭಯಪಡುವ ಅವಶ್ಯಕತೆ ಇಲ್ಲ. ಎಲ್ಲವೂ ಶುಭವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸರಿಯಾದ ನಿರ್ಣಯ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಯಾರು ಕೂಡ ಆತಂಕ ಮತ್ತು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಈಶ್ವರ ನಮ್ಮ ಜೊತೆ ಇದ್ದಾನೆ. ಎಲ್ಲವೂ ಸರಿಯಾಗುತ್ತೆ. ಧೈರ್ಯದಿಂದ ಇರಿ” ಎಂದು ಹೇಳಿದರು.
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

