ಏಷ್ಯಾಕಪ್ಗೆ ಭಾರತ ತಂಡ: ಐವರು ಆಟಗಾರರಿಗೆ ಅನ್ಯಾಯ!
India Squad For asia cup 2025: ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್ಗಳು ಸೂಪರ್-4 ಹಂತಕ್ಕೇರಲಿದೆ.
ಬಹುನಿರೀಕ್ಷಿತ ಏಷ್ಯಾಕಪ್ (Asia Cup 2025) ಟೂರ್ನಿಗೆ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ (Suryakumar Yadav) ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅದರಲ್ಲೂ ಕಳೆದ ಬಾರಿಯ ಐಪಿಎಲ್ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು 15 ಸದಸ್ಯರುಗಳ ಬಳಗಕ್ಕೆ ಆಯ್ಕೆ ಮಾಡಲಾಗಿಲ್ಲ. ಹಾಗಿದ್ರೆ ಈ ಬಾರಿ ಅವಕಾಶ ವಂಚಿತರಾದ ಆಟಗಾರರು ಯಾರೆಲ್ಲಾ ಎಂಬುದರ ವಿಶ್ಲೇಷಣೆ ಇಲ್ಲಿದೆ…
ಏಷ್ಯಾ ಕಪ್ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಮೀಸಲು ಆಟಗಾರರು: ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್.

