ಪ್ರಧಾನಿ ಮೋದಿ ಕಿರ್ಗಿಸ್ತಾನ ಭೇಟಿ: ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ

Updated on: Sep 01, 2026 | 10:28 AM

ಪ್ರಧಾನಿ ಮೋದಿ ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆದ ಎಸ್ಸಿಓ ಶೃಂಗಸಭೆಯಲ್ಲಿ ಭಾಗವಹಿಸಿ, ಇರಾನ್ ಅಧ್ಯಕ್ಷರೊಂದಿಗೆ ಹಾರ್ಮುಝ್‌ನಲ್ಲಿ ಭಾರತೀಯ ಹಡಗುಗಳ ಸುರಕ್ಷಿತ ಸಂಚಾರದ ಬಗ್ಗೆ ಚರ್ಚಿಸಿದರು. ರಷ್ಯಾ ಅಧ್ಯಕ್ಷ ಪುಟಿನ್‌ರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸುವ ಬಗ್ಗೆ ಮಾತುಕತೆ ನಡೆಸಿ, ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಒತ್ತಾಯಿಸಿದರು. ಮಾನವೀಯತೆಯ ಒಳಿತಿಗಾಗಿ ಯುದ್ಧದ ಅಂತ್ಯದತ್ತ ಸಾಗಬೇಕಿದೆ ಎಂದು ಪ್ರತಿಪಾದಿಸಿದರು.

ಕಿರ್ಗಿಸ್ತಾನ, ಸೆಪ್ಟೆಂಬರ್ 01: ಪ್ರಧಾನಿ ನರೇಂದ್ರ ಮೋದಿ ಕಿರ್ಗಿಸ್ತಾನ ಪ್ರವಾಸದ ಭಾಗವಾಗಿ ಬಿಷ್ಕೆಕ್‌ನಲ್ಲಿ ನಡೆದ 26ನೇ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಈ ಶೃಂಗಸಭೆಯಲ್ಲಿ ಚೀನಾ, ರಷ್ಯಾ ಮತ್ತು ಇರಾನ್ ಅಧ್ಯಕ್ಷರು ಸೇರಿದಂತೆ ಪ್ರಮುಖ ನಾಯಕರು ಹಾಜರಿದ್ದರು.

ಎಸ್​ಸಿಒ ಶೃಂಗಸಭೆಯಲ್ಲಿ ಪ್ರಮುಖವಾಗಿ ಪರಸ್ಪರ ವ್ಯಾಪಾರ, ಇಂಧನ, ಸಾರಿಗೆ ಸಂಪರ್ಕ, ಮತ್ತು ಡಿಜಿಟಲ್ ಸಹಕಾರದ ಕುರಿತು ಚರ್ಚೆಗಳು ನಡೆದವು. ಅಲ್ಲದೆ, ಪ್ರಾದೇಶಿಕ ಭದ್ರತೆ, ಭಯೋತ್ಪಾದನೆ ನಿಗ್ರಹ, ಗಡಿಯಾಚೆಗಿನ ಬೆದರಿಕೆಗಳು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಉಕ್ರೇನ್ ಯುದ್ಧದಂತಹ ಪ್ರಮುಖ ವಿಷಯಗಳ ಬಗ್ಗೆಯೂ ನಾಯಕರು ಮಾತುಕತೆ ನಡೆಸಿದರು.

ಪ್ರಧಾನಿ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿ ಮಾಡಿ, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸುರಕ್ಷಿತ ಮತ್ತು ಸುಗಮ ಸಂಚಾರದ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಅಲ್ಲದೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಭಾರತ-ರಷ್ಯಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಬಗ್ಗೆ ಚರ್ಚಿಸಿದರು.

ಈ ವೇಳೆ, ಪ್ರಧಾನಿ ಮೋದಿ ಉಕ್ರೇನ್ ಯುದ್ಧವನ್ನು ನಿಲ್ಲಿಸುವಂತೆ ಪುಟಿನ್‌ಗೆ ಒತ್ತಾಯಿಸಿ, ಯುದ್ಧವು ಮಾನವೀಯತೆಗೆ ಅಪಾಯಕಾರಿ ಎಂದು ಕಿವಿ ಮಾತು ಹೇಳಿದರು. “ಮಾನವೀಯತೆಯ ಒಳಿತಿಗಾಗಿ ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದ ದಿಕ್ಕಿನತ್ತ ಸಾಗಬೇಕಿದೆ” ಎಂದು ಮೋದಿ ಪ್ರತಿಪಾದಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More