ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

Updated on: Jan 23, 2026 | 3:58 PM

ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿ ಹೊರಹೊಮ್ಮಿದೆ.

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿ ಹೊರಹೊಮ್ಮಿದೆ. ನಗರದ ಸರಾಸರಿ ಸಂಚಾರ ದಟ್ಟಣೆ ಪ್ರಮಾಣವು ಶೇಕಡ 74.4ರಷ್ಟಿದ್ದು, ಇದು 2024ಕ್ಕಿಂತ ಶೇಕಡ 1.7ರಷ್ಟು ಹೆಚ್ಚಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!