ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ: ದೆಹಲಿ-ಚೆನ್ನೈ ವಿಮಾನ ಹೈದರಾಬಾದ್​ನಲ್ಲಿ ತುರ್ತು ಲ್ಯಾಂಡಿಂಗ್

Updated on: Oct 12, 2026 | 8:56 AM

ಇಂಡಿಗೋ ದೆಹಲಿ-ಚೆನ್ನೈ ವಿಮಾನದಲ್ಲಿ ಪ್ರಯಾಣಿಕರ ಲಗೇಜ್‌ನಲ್ಲಿದ್ದ ಪವರ್ ಬ್ಯಾಂಕ್ ಸ್ಪೋಟಗೊಂಡ ಪರಿಣಾಮ ವಿಮಾನವನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಸಿಬ್ಬಂದಿ ಮತ್ತು ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ತಕ್ಷಣವೇ ಬೆಂಕಿಯನ್ನು ನಂದಿಸಿ ದೊಡ್ಡ ದುರಂತ ತಪ್ಪಿಸಲಾಗಿದೆ.

ನವದೆಹಲಿ, ಅಕ್ಟೋಬರ್ 12: ದೆಹಲಿಯಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟಗೊಂಡ ಘಟನೆ ನಡೆದಿದೆ. ವಿಮಾನ ಹಾರಾಟದ ವೇಳೆ, ಪ್ರಯಾಣಿಕರ ಲಗೇಜ್‌ನಲ್ಲಿ ಇಟ್ಟಿದ್ದ ಪವರ್ ಬ್ಯಾಂಕ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದರು.

ತಕ್ಷಣವೇ ವಿಮಾನ ಸಿಬ್ಬಂದಿ ಮತ್ತು ಕೆಲವು ಪ್ರಯಾಣಿಕರು ಸಮಯ ಪ್ರಜ್ಞೆ ಮೆರೆದು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಅವರ ಶೀಘ್ರ ಪ್ರತಿಕ್ರಿಯೆ ಮತ್ತು ಹರಸಾಹಸದಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಸುರಕ್ಷತಾ ದೃಷ್ಟಿಯಿಂದ, ದೆಹಲಿ-ಚೆನ್ನೈ ಮಾರ್ಗದಲ್ಲಿದ್ದ ವಿಮಾನವನ್ನು ಹೈದರಾಬಾದ್‌ನತ್ತ ಡೈವರ್ಟ್ ಮಾಡಲಾಯಿತು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಸುರಕ್ಷಿತವಾಗಿ ಇಳಿದ ನಂತರ, ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಈ ಘಟನೆಯು ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳ ಸುರಕ್ಷತೆಯ ಕುರಿತು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More