ಬೆಂಗಳೂರಿನಿಂದ ಹೊರಟ್ಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ತಮಿಳುನಾಡಿನ ಮಧುರೈಗೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ 6ಇ6526 ವಿಮಾನದಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು, (ನವೆಂಬರ್ 16): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ತಮಿಳುನಾಡಿನ ಮಧುರೈಗೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ 6ಇ6526 ವಿಮಾನದಲ್ಲಿ ಈ ಘಟನೆ ನಡೆದಿದೆ. 92 ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ವಿಮಾನ ಟೇಕಾಫ್‌ಗಾಗಿ ರನ್‌ವೇನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಹೈಡ್ರಾಲಿಕ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಎಚ್ಚೆತ್ತುಕೊಂಡ ಪೈಲಟ್ ತುರ್ತು ಬ್ರೇಕ್ ಹಾಕಿ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದ್ದಾರೆ. ಇದರಿಂದ ಅನಾಹುತ ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
