ಇಂಡಿಗೋ ವಿಮಾನಗಳು ರದ್ದು: KSRTC, BMTC ಆದಾಯಕ್ಕೂ ಹೊಡೆತ ಬಿತ್ತು
ಇಂಡಿಗೋ ವಿಮಾನಗಳ ರದ್ದತಿಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು ದುಪ್ಪಟ್ಟು ಮಾಡಿವೆ. ಇನ್ನೊಂದೆಡೆ ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಆದಾಯಕ್ಕೆ ಹೊಡೆತಬಿದ್ದಿದೆ. ವಿಮಾನಗಳು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ.
ಬೆಂಗಳೂರು, (ಡಿಸೆಂಬರ್ 10): ಇಂಡಿಗೋ ವಿಮಾನಗಳ ರದ್ದತಿಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು ದುಪ್ಪಟ್ಟು ಮಾಡಿವೆ. ಇನ್ನೊಂದೆಡೆ ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಆದಾಯಕ್ಕೆ ಹೊಡೆತಬಿದ್ದಿದೆ. ವಿಮಾನಗಳು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ. ವಿಮಾನ ನಿಲ್ದಾಣದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿರುತ್ತಾರೆ. ಆದರೆ, ಕಳೆದ ಮೂರು ದಿನಗಳಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಫ್ಲೈಬಸ್ಗಳ ಆದಾಯ ಸಂಗ್ರಹದಲ್ಲೂ ಭಾರಿ ಕುಸಿತವಾಗಿದೆ. ಕಳೆದ ಒಂದು ವಾರದಲ್ಲಿ 10 ಲಕ್ಷ ರೂ ಆದಾಯದಲ್ಲಿ ಕುಸಿತ ಕಂಡಿದೆ.

