ಇಂಡಿಗೋ ವಿಮಾನಗಳು ರದ್ದು: KSRTC, BMTC ಆದಾಯಕ್ಕೂ ಹೊಡೆತ ಬಿತ್ತು

Updated on: Dec 10, 2025 | 2:39 PM

ಇಂಡಿಗೋ ವಿಮಾನಗಳ ರದ್ದತಿಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು ದುಪ್ಪಟ್ಟು ಮಾಡಿವೆ. ಇನ್ನೊಂದೆಡೆ ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಬಿಎಂಟಿಸಿ ಹಾಗೂ ಕೆಎಸ್​​ಆರ್​​ಟಿಸಿ ಆದಾಯಕ್ಕೆ ಹೊಡೆತಬಿದ್ದಿದೆ. ವಿಮಾನಗಳು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್​​ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ.

ಬೆಂಗಳೂರು, (ಡಿಸೆಂಬರ್ 10): ಇಂಡಿಗೋ ವಿಮಾನಗಳ ರದ್ದತಿಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು ದುಪ್ಪಟ್ಟು ಮಾಡಿವೆ. ಇನ್ನೊಂದೆಡೆ ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಬಿಎಂಟಿಸಿ ಹಾಗೂ ಕೆಎಸ್​​ಆರ್​​ಟಿಸಿ ಆದಾಯಕ್ಕೆ ಹೊಡೆತಬಿದ್ದಿದೆ. ವಿಮಾನಗಳು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್​​ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ. ವಿಮಾನ ನಿಲ್ದಾಣದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿರುತ್ತಾರೆ. ಆದರೆ, ಕಳೆದ ಮೂರು ದಿನಗಳಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಬಿಎಂಟಿಸಿ ಮತ್ತು ಕೆಎಸ್ಆರ್​ಟಿಸಿ ಫ್ಲೈಬಸ್​ಗಳ ಆದಾಯ ಸಂಗ್ರಹದಲ್ಲೂ ಭಾರಿ ಕುಸಿತವಾಗಿದೆ. ಕಳೆದ ಒಂದು ವಾರದಲ್ಲಿ 10 ಲಕ್ಷ ರೂ ಆದಾಯದಲ್ಲಿ ಕುಸಿತ ಕಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More