AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿರುದ್ಧ ಸಿಡಿದೆದ್ದ ವಾಟಾಳ್: ಪ್ರಯಾಣಿಕರ ಸಮಸ್ಯೆಗೆ ಧ್ವನಿಯಾದ ಕನ್ನಡಪರ ಹೋರಾಟಗಾರ

ಇಂಡಿಗೋ ವಿರುದ್ಧ ಸಿಡಿದೆದ್ದ ವಾಟಾಳ್: ಪ್ರಯಾಣಿಕರ ಸಮಸ್ಯೆಗೆ ಧ್ವನಿಯಾದ ಕನ್ನಡಪರ ಹೋರಾಟಗಾರ

ನವೀನ್ ಕುಮಾರ್ ಟಿ
| Edited By: |

Updated on: Dec 05, 2025 | 9:01 PM

Share

ಇಂಡಿಗೋ ಏರ್​ಲೈನ್ಸ್ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಏರ್​ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ವಿಡಿಯೋ ನೋಡಿ.

ದೇವನಹಳ್ಳಿ, ಡಿಸೆಂಬರ್​ 05: ಇಂಡಿಗೋ ಏರ್​ಲೈನ್ಸ್ ವಿಮಾನ ವ್ಯತ್ಯಯ ಹಿನ್ನೆಲೆ ನಿನ್ನೆಯಿಂದ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರ ಪರಿಸ್ಥಿತಿ ಅತಂತ್ರವಾಗಿದೆ. ಸದ್ಯ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಏರ್​ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲವೆಂದು ಗರಂ ಆದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More