ಕೇವಲ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದರು: ಪ್ರಲ್ಹಾದ್ ಜೋಶಿ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ನೀಡಲಾಗುವ 5 ಕೆಜಿ ಅಕ್ಕಿಯನ್ನು ಹಂಚುವ ಯೋಗ್ಯತೆ ಸಿದ್ದರಾಮಯ್ಯ ಸರ್ಕಾರಕ್ಕಿಲ್ಲ, ಆರ್ಥಿಕವಾಗಿ ತಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಹೇಳುತ್ತಿರುವವರಿಗೆ ಗೃಹ ಲಕ್ಷ್ಮಿ ಯೋಜನೆಯ ₹ 2,000ಹಣವನ್ನು ಪ್ರತಿ ತಿಂಗಳು ನಿಯಮಿತವಾಗಿ ಫಲಾನುಭವಿಗಳಿಗೆ ನೀಡಲಾಗುತ್ತಿಲ್ಲ, ಯುವನಿಧಿ ಯೋಜನೆಯ ಬಗ್ಗೆ ಮಾತಾಡದಿರುವುದೇ ವಾಸಿ ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ಗದಗ, ಜುಲೈ 12: ಕಾಂಗ್ರೆಸ್ ನಾಯಕರಿಗೆ ಗಾಂಧಿ ಪರಿವಾರದ ವಿರುದ್ಧ ಮಾತಾಡಲು ಸಾಧ್ಯವಿಲ್ಲ, ಹಾಗಾಗಿ ತುರ್ತು ಪರಿಸ್ಥಿತಿಯನ್ನು ಸಮರ್ಥನೆ ಮಾಡಿಕೊಳ್ಳಲಾಗದೆ ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹೇಳುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi, Union Minister) ಹೇಳಿದರು. ಶುಕ್ರವಾರ ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಕಾಂಗ್ರೆಸ್ ಅಘೋಷಿತ ಎಮರ್ಜೆನ್ಸಿ ಜಾರಿಯಲ್ಲಿದೆ ಅಂತ ಹೇಳೋದೇ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಭಾದಿತವಾಗಿದೆ ಅನ್ನೋದಕ್ಕೆ ಸಾಕ್ಷಿ, ಯಾಕೆಂದರೆ 1975ರಲ್ಲಿ ಹಾಗೆ ಹೇಳುವುದು ಸಹ ಸಾಧ್ಯವಿರಲಿಲ್ಲ ಎಂದು ಜೋಶಿ ಹೇಳಿದರು. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿಯನ್ನು ದೇಶದ ಮೇಲೆ ಹೇರಿದ್ದರು ಎಂದು ಸಚಿವ ಹೇಳಿದರು.
ಇದನ್ನೂ ಓದಿ: ತುರ್ತು ಪರಿಸ್ಥಿತಿ ವೇಳೆ ಜೈಲುಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಚಿತ್ರಹಿಂಸೆ, ಕನಿಷ್ಠ 100 ಸಾವು; ಸುನಿಲ್ ಅಂಬೇಕರ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ