ಎಣ್ಣೆ ಮತ್ತಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್ ಮಿಸ್!
ಇಂದಿರಾನಗರ 100 ಅಡಿ ರಸ್ತೆಯಲ್ಲಿ ಗುರುವಾರ ರಾತ್ರಿ 11:34ರ ಸುಮಾರಿಗೆ ಮದ್ಯಪಾನ ಮಾಡಿ ಅತಿ ವೇಗವಾಗಿ ಬಂದ ಸ್ಕೋಡಾ ಕಾರ್, ಡಿವೈಡರ್ ದಾಟಿ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಹೊರಗಿದ್ದ ಯುವಕ-ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀವನ್‌ಭೀಮಾನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್ರನ್ನು ಹಾರಿಸುವ ಮೂಲಕ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 10, 2026 05:22 PM