AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

Video: ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ನಯನಾ ರಾಜೀವ್
|

Updated on:Jun 01, 2026 | 11:01 AM

Share

ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್​ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ. ಸುಮಾರು ಒಂದು ಗಂಟೆ ಕಾಲ ನೀರಿನ ಹರಿವು ಜೋರಾಗಿದ್ದು, ಬೆಳಗ್ಗೆ 8.30 ರ ಸುಮಾರಿಗೆ ನೀರು ಸರಬರಾಜು ಸ್ಥಗಿತಗೊಂಡಾಗ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು.

ಇಂದೋರ್, ಜೂನ್ 01: ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್​ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ. ಸುಮಾರು ಒಂದು ಗಂಟೆ ಕಾಲ ನೀರಿನ ಹರಿವು ಜೋರಾಗಿದ್ದು, ಬೆಳಗ್ಗೆ 8.30 ರ ಸುಮಾರಿಗೆ ನೀರು ಸರಬರಾಜು ಸ್ಥಗಿತಗೊಂಡಾಗ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jun 01, 2026 11:00 AM
Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More