Video: ನರ್ಮದಾ-ಕ್ಷಿಪ್ರ ಪೈಪ್‌ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್‌ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್‌ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ. ಸುಮಾರು ಒಂದು ಗಂಟೆ ಕಾಲ ನೀರಿನ ಹರಿವು ಜೋರಾಗಿದ್ದು, ಬೆಳಗ್ಗೆ 8.30 ರ ಸುಮಾರಿಗೆ ನೀರು ಸರಬರಾಜು ಸ್ಥಗಿತಗೊಂಡಾಗ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು.
ಇಂದೋರ್, ಜೂನ್ 01: ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್‌ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್‌ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ. ಸುಮಾರು ಒಂದು ಗಂಟೆ ಕಾಲ ನೀರಿನ ಹರಿವು ಜೋರಾಗಿದ್ದು, ಬೆಳಗ್ಗೆ 8.30 ರ ಸುಮಾರಿಗೆ ನೀರು ಸರಬರಾಜು ಸ್ಥಗಿತಗೊಂಡಾಗ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 01, 2026 11:00 AM
Loading...
Unable to load recommendations.
Follow Us