ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಅಪ್ರಾಪ್ತ ಬಾಲಕ
ಮಧ್ಯಪ್ರದೇಶದ ಇಂದೋರ್‌ನಲ್ಲಿ ವೇಗವಾಗಿ ಬಂದ ಕಾರೊಂದು ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಹರಿದಿದೆ. ಇದರಿಂದ ಕಾರಿನಡಿ ಸಿಲುಕಿ ಆ ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ 17 ವರ್ಷದ ಬಾಲಕ ಕಾರು ಅಪಘಾತವಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಡಿ ಸಿಲುಕಿದ ಬಾಲಕಿಯರು ಸಹಾಯಕ್ಕಾಗಿ ಕಿರುಚಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಿರಿದಾದ ರಸ್ತೆಯೊಂದರಲ್ಲಿ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದ ಅಂಗಡಿಯನ್ನು ಕೂಡ ಧ್ವಂಸ ಮಾಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos