ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ: ಕೊಪ್ಪಳದಲ್ಲಿ ಯತ್ನಾಳ್ ವಿರುದ್ಧ ದೂರು ದಾಖಲಿಸಿದ ರಜಾಕ್
ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಕೊಪ್ಪಳದ ಯುವಕ ಗವಿಸಿದ್ದಪ್ಪ ಕೊಲೆಯಾದ ನಂತರ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮಾಜಿ ಸಚಿವ ಕೆಎಸ್ ಈಶ್ವರಪ್ಪರೊಂದಿಗೆ ತೆರಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ತಪ್ಪಾ? ಅಂತ ಪ್ರಶ್ನಿಸಿ ಹಿಂದೂ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಮದುವೆಯಾದರೆ ತಾನು ₹5 ಲಕ್ಷ ಕೊಡೋದಾಗಿ ಹೇಳಿದ್ದರು.
ಕೊಪ್ಪಳ, ಆಗಸ್ಟ್ 20: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು ವಿವಾದಕ್ಕೆ ಕಾರಣವಾಗಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸಿಕೊಂಡಿರುವ ಅಬ್ದುಲ್ ರಜಾಕ್ (Abdul Razaque) ಇಂದು ಕೊಪ್ಪಳದ ನಗರ ಪೊಲೀಸ್ ಠಾಣೆಯಲ್ಲಿ ಶಾಸಕನ ವಿರುದ್ಧ ದೂರು ದಾಖಲಿಸಿದರು. ರಜಾಕ್, ದೂರು ದಾಖಲಿಸಲು ಬೆಂಗಳೂರುನಿಂದ ಕೊಪ್ಪಳವರೆಗೆ ಬಂದಿದ್ದು ವಿಶೇಷ. ಪೊಲೀಸ್ ಠಾಣೆಯನ್ನು ಪ್ರವೇಶಿಸುವ ಮುನ್ನ ರಜಾಕ್ ಪ್ರಾಯಶಃ ನಗರದ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಲು ಪ್ರಯತ್ನಿಸುತ್ತಾರೆ.
ಇದನ್ನೂ ಓದಿ: ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

