‘ಕುಮಾರಸ್ವಾಮಿ ಹೇಳಿಕೆ ಸುಳ್ಳು’: ಕೇಂದ್ರ ಸಚಿವರ ಆರೋಪಕ್ಕೆ ಎಂ.ಬಿ. ಪಾಟೀಲ್​​ ತಿರುಗೇಟು

Edited By:

Updated on: Nov 18, 2026 | 1:48 PM

ಹೋಂಡಾ ಕಂಪನಿ ಭೇಟಿ ಕುರಿತ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಕಂಪನಿಗೆ 136 ಎಕರೆ ಜಮೀನು ನೀಡಲಾಗಿದ್ದು, ಕರ್ನಾಟಕದಲ್ಲಿ ಉದ್ಯಮ ವಿಸ್ತರಣೆಗೆ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕಕ್ಕೆ ಬರುವ ಉದ್ಯಮಗಳ ವಿಚಾರದಲ್ಲಿ ಕೇಂದ್ರ ಸಹಕಾರ ನೀಡಬೇಕು. ಅದುಬಿಟ್ಟು ರಾಜ್ಯಕ್ಕೆ ಹಾನಿಯಾಗುವಂತಹ ಹೇಳಿಕೆಗಳನ್ನು ನೀಡಬೇಡಿ. ಕರ್ನಾಟಕಕ್ಕೆ ಬರಬೇಕಾದ ಉದ್ಯಮಗಳನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಲು ಪ್ರೋತ್ಸಾಹಿಸಬೇಡಿ ಎಂದು ಎಂ.ಬಿ. ಪಾಟೀಲ್​​ ಆಗ್ರಹಿಸಿದ್ದಾರೆ.

ಬೆಂಗಳೂರು, ನವೆಂಬರ್​​ 18: ಹೋಂಡಾ ಕಂಪನಿ ಭೇಟಿ ಬಗ್ಗೆ ಕುಮಾರಸ್ವಾಮಿ ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಅವರನ್ನು ಹೋಂಡಾ ಕಂಪನಿ ಭೇಟಿ ಮಾಡಿತ್ತು ಎಂಬುದು ಸುಳ್ಳು. ಕಂಪನಿ ಕೂಡ ನಾವು ಯಾರನ್ನೂ ಭೇಟಿ ಮಾಡಿಲ್ಲ ಎಂದಿದೆ. ಹೋಂಡಾ ಕಂಪನಿಯವರು ತುಂಬಾ ಸಂತೋಷವಾಗಿದ್ದಾರೆ, ಕಂಪನಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ನಾವು 136 ಎಕರೆ ಜಮೀನು ಕೊಟ್ಟಿದ್ದೇವೆ. ಅಲ್ಲಿಯೇ ಅವರು ತಮ್ಮ ಉದ್ಯಮವನ್ನು ವಿಸ್ತರಣೆ ಮಾಡುತ್ತಿದ್ದಾರೆ. ಇವಿ ಸೇಲ್ಸ್​​ ವಿಚಾರದಲ್ಲಿ ಅವರಿಗೆ ಕೆಲವು ಆಂತರಿಕ ಸಮಸ್ಯೆಗಳಿವೆ. ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ನಮ್ಮ ಇಲಾಖೆಯಿಂದ ಅವರಿಗೆ ಅಗತ್ಯ ಸಹಕಾರ ನೀಡುತ್ತಿದ್ದೇವೆ. ಉದ್ಯಮ ಸ್ನೇಹಿ ವಾತಾವರಣದ ಬಗ್ಗೆ ಸುಮ್ಮನೆ ಆರೋಪ ಮಾಡಬೇಡಿ. ಕುಮಾರಸ್ವಾಮಿ ಅವರು ಸುಮ್ಮನೆ ಗೊತ್ತಿಲ್ಲದೆ ಮಾತನಾಡಬಾರದು. ಪಕ್ಕದ ರಾಜ್ಯದವರು ಶೇಕಡಾ 50ರಷ್ಟು ಇನ್ಸೆಂಟೀವ್ ನೀಡುತ್ತಾರೆ. ನೀವೂ ನೀಡಿ ಎಂದು ಹೇಳಿದರೆ ಕೊಡಲು ಸಾಧ್ಯವೇ? ಕುಮಾರಸ್ವಾಮಿಯವರು ಜವಾಬ್ದಾರಿಯಿಂದ ಮಾತನಾಡಬೇಕು. ಅವರಿಗೆ ಬೃಹತ್ ಕೈಗಾರಿಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದಿರಬಹುದು. ಕರ್ನಾಟಕಕ್ಕೆ ಬರುವ ಉದ್ಯಮಗಳ ವಿಚಾರದಲ್ಲಿ ಕೇಂದ್ರ ಸಹಕಾರ ನೀಡಬೇಕು. ನಮ್ಮ ಜೊತೆ ಕೈ ಜೋಡಿಸಿ, ನಮಗೆ ಸಹಾಯ ಮಾಡಿ. ಅದುಬಿಟ್ಟು ರಾಜ್ಯಕ್ಕೆ ಹಾನಿಯಾಗುವಂತಹ ಹೇಳಿಕೆಗಳನ್ನು ನೀಡಬೇಡಿ. ಕರ್ನಾಟಕಕ್ಕೆ ಬರಬೇಕಾದ ಉದ್ಯಮಗಳನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಲು ಪ್ರೋತ್ಸಾಹಿಸಬೇಡಿ ಎಂದು ಎಂ.ಬಿ. ಪಾಟೀಲ್​​ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More