ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯಾವುದನ್ನೂ ಸ್ಪಷ್ಟವಾಗಿ ಹೇಳದ ಸಚಿವ ಎಂಬಿ ಪಾಟೀಲ್

Updated on: Jul 25, 2025 | 1:32 PM

ಕೇಂದ್ರ ಸಚಿವರ ಜೊತೆ ನಡೆದ ಸಭೆಯ ಹಿನ್ನೆಲೆಯಲ್ಲಿ ತಮ್ಮ ಅಧಿಕಾರಿಗಳೊಂದಿಗೆ ಸೋಮವಾರ ಮತ್ತು ಮಂಗಳವಾರದಂದು ಮೀಟಿಂಗ್ ಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುವುದಾಗಿ ಪಾಟೀಲ್ ಹೇಳಿದರು. ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು ಮತ್ತು ರಾಜ್ಯಕ್ಕೆ ಲಾಭದಾಯಕವಾಗುವ ಅನೇಕ ಸಲಹೆಗಳನ್ನು ಸಚಿವ ನೀಡಿದರು ಎಂದು ಪಾಟೀಲ್ ಹೇಳಿದರು.

ಬೆಂಗಳೂರು, ಜುಲೈ 25: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕಾರಿಗಳೊಂದಿಗೆ ನಿನ್ನೆ ಕೇಂದ್ರ ವಿಮಾನಯಾನ ಖಾತೆ ಸಚಿವ ಕೆ ರಾಂ ಮೋಹನ್ ನಾಯ್ಡು (K Ram Mohan Naidu) ಅವರನ್ನು ಭೇಟಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಸಚಿವರೊಂದಿಗೆ ಚರ್ಚೆಯಾಗಿದೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಿದ್ದಾರೆ, ವರದಿಯನ್ನು ಆದಷ್ಟು ಬೇಗ ತಮಗೆ ನೀಡಿದರೆ ಮುಂದಿನ ತಯಾರಿಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾಗಿ ಪಾಟೀಲ್ ತಿಳಿಸಿದರು. ಕೇಂದ್ರ ಸಚಿವರೊಂದಿಗೆ ಮೈಸೂರು, ಕಲಬುರಗಿ, ಶಿವಮೊಗ್ಗ, ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳ ಬಗ್ಗೆಯೂ ಚರ್ಚಿಸಲಾಯಿತು ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ:  ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ