ಇತ್ತ ನೀರಿಗಾಗಿ ರೈತರು ಪರದಾಟ: ಅತ್ತ ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು

Edited By:

Updated on: Sep 20, 2026 | 9:30 AM

ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರ ಛಾಯೆ ಆವರಿಸಿದ್ದು, ಮಳೆ ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಅದಲ್ಲೂ ಪ್ರಮುಖವಾಗಿ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಎಗ್ಗಿಲ್ಲದೆ ನೀರಿನ ಕಳ್ಳತನವಾಗುತ್ತಿದೆ. ಒಂದೆಡೆ ಡ್ಯಾಂನಲ್ಲಿ ನೀರಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳುತ್ತಿದ್ದರೆ, ಇನ್ನೊಂದೆಡೆ ಕೊಪ್ಪಳ ತಾಲೂಕಿನ ಮುನಿರಾಬಾದ್​​ನ ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ನೀರು ಕಳ್ಳತನ ಮಾಡುತ್ತಿವೆ. ಈಗಾಗಲೇ ಬೆಳೆದ ಬೆಳೆಗಳಿಗೆ ನೀರಿಲ್ಲ ಎಂದು ರೈತರು ಪರದಾಡುತ್ತಿದ್ದು, ನಿತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳ, (ಸೆಪ್ಟೆಂಬರ್ 20): ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರ ಛಾಯೆ ಆವರಿಸಿದ್ದು, ಮಳೆ ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಅದಲ್ಲೂ ಪ್ರಮುಖವಾಗಿ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಎಗ್ಗಿಲ್ಲದೆ ನೀರಿನ ಕಳ್ಳತನವಾಗುತ್ತಿದೆ. ಒಂದೆಡೆ ಡ್ಯಾಂನಲ್ಲಿ ನೀರಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳುತ್ತಿದ್ದರೆ, ಇನ್ನೊಂದೆಡೆ ಕೊಪ್ಪಳ ತಾಲೂಕಿನ ಮುನಿರಾಬಾದ್​​ನ ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ನೀರು ಕಳ್ಳತನ ಮಾಡುತ್ತಿವೆ. ಈಗಾಗಲೇ ಬೆಳೆದ ಬೆಳೆಗಳಿಗೆ ನೀರಿಲ್ಲ ಎಂದು ರೈತರು ಪರದಾಡುತ್ತಿದ್ದು, ನಿತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ.

ಈಗಾಗಲೇ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮೊದಲನೆಯ ಬೆಳೆಗೆ ಇನ್ನೂ 15 ರಿಂದ 20 ಟಿಎಂಸಿ ನೀರು ಬೇಕು. ಈ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ.ಕಳೆದ ತಿಂಗಳು ಅಗಸ್ಟ್ 11 ರಂದು ಜರುಗಿದ ಐಸಿಸಿ ಸಭೆಯಲ್ಲಿ ಕಾರ್ಖಾನೆಗಳಿಗೆ ನೀರು ಕೊಡುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದರು. ಆದ್ರೆ, ಇದೀಗ ಕಾರ್ಖಾನೆಗಳಿಗೆ ನಿರಂತರ ನೀರು ಹರಿದು ಹೋಗುತ್ತಿದೆ. ನೀರಿಲ್ಲ ನೀರಿಲ್ಲ ಎಂದು ಕಾರ್ಖಾನೆಗಳಿಗೆ ನೀರು ಮಾರಿಕೊಳ್ಳಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More