ಮಹಾರಾಷ್ಟ್ರ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸತತ ಮಳೆ, ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಳ
ಬೆಳಗಾವಿ ಜಿಲ್ಲೆಯ ಮೂಲಕ ಹರಿವ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿ ಅಲ್ಲಲ್ಲಿ ಸೇತುವೆಗಳು ಮುಳುಗಡೆಯಾಗಿವೆ ಮತ್ತು ರಸ್ತೆಗಳ ಮೇಲೆ ನೀರು ಹರಿದು ಬರುತ್ತಿದೆ. ದೃಶ್ಯಗಳಲ್ಲಿ ಕಾಣುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಪಕ್ಕದಲ್ಲಿ ಮೇಲ್ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ. ಮಾನ್ಸೂನ್ ಸೀಸನ್ ಶುರುವಾಗಿರುವುದರಿಂದ ಇನ್ನೂ ಮೂರ್ನಾಲ್ಕು ತಿಂಗಳು ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಂತೆಯೇ.
ಬೆಳಗಾವಿ, ಜೂನ್ 23: ಮಳೆಯ ಅಬ್ಬರ ಕರ್ನಾಟಕದಲ್ಲಿ (Karnataka) ಕೊಂಚ ಕಡಿಮೆಯಾದಂತೆ ಕಾಣುತ್ತದೆ, ಅದರೆ ಕೆಲವು ಭಾಗಗಳಲ್ಲಿ ಮಾತ್ರ ಅದು ಧಾರಾಕಾರವಾಗಿ ಸುರಿಯುತ್ತಿದೆ. ನೆರೆರಾಜ್ಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಂತೂ ಮಳೆ ಎಡೆಬಿಡದೆ ಸುರಿಯುತ್ತಿದೆ. ಹಾಗಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಅಧಿಕೃತ ಮೂಲಗಳ ಪ್ರಕಾರ ಒಂದು ಲಕ್ಷ ಕ್ಯೂಸೆಕ್ಸ್ ಹೆಚ್ಚು ನೀರು ಹರಿದು ಬಂದಿದೆ. ನದಿಯಲ್ಲಿ ಒಳ ಹರಿವು ಹೆಚ್ಚಾದ ಕಾರಣ ದೂದ್ ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಾಗಿದೆ.
ಇದನ್ನೂ ಓದಿ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ; ವಿಭೂತಿ ಫಾಲ್ಸ್ಗೆ ಜೀವ ಕಳೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ