ಕೃಷ್ಣಾ, ಬೀಮಾ ನದಿಗೆ ಹೆಚ್ಚಿದ ಒಳಹರಿವು: ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ಪಾತ್ರದ ಗ್ರಾಮಸ್ಥರು ನದಿ ತೀರಕ್ಕೆ ಹೋಗದಂತೆ ಹಾಗೂ ಜಾನುವಾರುಗಳನ್ನು ಕಳುಹಿಸದಂತೆ ಎಚ್ಚರಿಕೆ ನೀಡಲಾಗಿದೆ. ಗ್ರಾಮಗಳಲ್ಲಿ ಡಂಗೂರ ಹಾಗೂ ಅನೌನ್ಸ್ ಮೆಂಟ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಈ ಬಗ್ಗೆ ‘ಟಿವಿ9’ ಪ್ರತಿನಿಧಿ ಅಮೀನ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
ಯಾದಗಿರಿ, ಮೇ 28: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಯಾದಗಿರಿ ಜಿಲ್ಲೆಯ ಜನರಲ್ಲಿ ಪ್ರವಾಹದ ಆತಂಕ ಆರಂಭವಾಗಿದೆ. ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಭೀಮಾ ನದಿ ಹರಿಯುತ್ತಿದ್ದು, ಎರಡೂ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಭೀಮಾ ನದಿಗೆ ಮೂರು ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗುರುಸಣಗಿ ಬ್ರೀಜ್ಡ್ ಕಂ ಬ್ಯಾರೇಜ್ನಿಂದ ನೀರು ಬಿಡುಗಡೆ ಮಾಡಲಾಗಿದೆ. ಗುರುವಾರ ಅಥವಾ ಶುಕ್ರವಾರ ಸೊನ್ನಾ ಬ್ಯಾರೇಜ್ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Published on: May 28, 2025 11:13 AM
