ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

Edited By:

Updated on: Jun 13, 2026 | 2:33 PM

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ. ಸೆಲ್‌ನಿಂದ ಹೊರಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆ ಎದುರಿಸುತ್ತಿರುವ ಆರೋಪಿ (A1) ಮೊಹಮ್ಮದ್ ಖಾಸಿಫ್ ಮತ್ತು ರೆಹಾನ್ ಶರೀಫ್ (A4), ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಧಾರವಾಡ, ಜೂನ್ 13: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ. ಸೆಲ್‌ನಿಂದ ಹೊರಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆ ಎದುರಿಸುತ್ತಿರುವ ಆರೋಪಿ (A1) ಮೊಹಮ್ಮದ್ ಖಾಸಿಫ್ ಮತ್ತು ರೆಹಾನ್ ಶರೀಫ್ (A4), ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಯಾಳು ವಾರ್ಡನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೈದಿಗಳ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪುಂಡಾಟಿಕೆಗೆ ಜೈಲರ್ ಕಠಿಣ ಶಿಕ್ಷೆ ವಿಧಿಸಿದ್ದು, ಮುಂದಿನ ಒಂದು ತಿಂಗಳು ಕುಟುಂಬದವರ ಭೇಟಿಗೆ ನಿಷೇಧ ಹೇರಿದ್ದಾರೆ. ಪರಿಣಾಮ, ಶಿವಮೊಗ್ಗದಿಂದ ಕೈದಿಗಳನ್ನು ನೋಡಲು ಬಂದಿದ್ದ ಕುಟುಂಬಸ್ಥರು ಜೈಲಿನಿಂದ ಬರಿಗೈಲಿ ವಾಪಸ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us