AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್ಎಸ್ ಮಾಲ್ವನ್: ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ

ಐಎನ್ಎಸ್ ಮಾಲ್ವನ್: ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ

ಅಶೋಕ್​ ಪೂಜಾರಿ
| Edited By: |

Updated on:Jul 22, 2026 | 3:00 PM

Share

ಕಾರವಾರದ ಕದಂಬ ನೌಕಾನೆಲೆಯಲ್ಲಿ ಸಂಪೂರ್ಣ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐಎನ್ಎಸ್ ಮಾಲ್ವನ್ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ. ಇದು ಜಲಾಂತರ್ಗಾಮಿಗಳನ್ನು ಪತ್ತೆ ಹಚ್ಚಿ ನಾಶಪಡಿಸುವ ಸಾಮರ್ಥ್ಯ ಹೊಂದಿದೆ. ಶತ್ರುಪಡೆಗಳಿಂದ ಭಾರತದ ಕಡಲತೀರಗಳನ್ನು ರಕ್ಷಿಸುವ ನೌಕಾಪಡೆಯ ಕಾರ್ಯಾಚರಣೆಗೆ ಇದು ಇನ್ನಷ್ಟು ಶಕ್ತಿ ನೀಡಲಿದೆ.

ಕಾರವಾರ, ಜುಲೈ 22: ಭಾರತೀಯ ನೌಕಾಪಡೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐಎನ್ಎಸ್ ಮಾಲ್ವನ್ ಕಾರವಾರದ ಕದಂಬ ನೌಕಾನೆಲೆಯಲ್ಲಿ ಸೇರ್ಪಡೆಯಾಗಿದೆ. ಕೇರಳದ ಕೊಚ್ಚಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾದ ಐಎನ್ಎಸ್ ಮಾಲ್ವನ್ ಶೇಕಡಾ 80ರಷ್ಟು ಸ್ವದೇಶಿ ನಿರ್ಮಿತವಾಗಿದೆ. 78 ಮೀಟರ್ ಉದ್ದ, 11.2 ಮೀಟರ್ ಅಗಲ ಮತ್ತು 2.7 ಮೀಟರ್ ಆಳ ಹೊಂದಿರುವ ಈ ಯುದ್ಧ ನೌಕೆಯು 7 ಅಧಿಕಾರಿಗಳು ಮತ್ತು 57 ನಾವಿಕರಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಇದರ ಪ್ರಮುಖ ವೈಶಿಷ್ಟ್ಯವೆಂದರೆ ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆ (ASW) ಸಾಮರ್ಥ್ಯ. ಸಮುದ್ರದ ಆಳದಲ್ಲಿನ ಶತ್ರು ಜಲಾಂತರ್ಗಾಮಿಗಳನ್ನು ಪತ್ತೆ ಹಚ್ಚಿ ನಾಶಪಡಿಸಲು ಅಗತ್ಯವಿರುವ ಸುಧಾರಿತ ಶಸ್ತ್ರಾಸ್ತ್ರಗಳು ಮತ್ತು ಆಧುನಿಕ ತಂತ್ರಜ್ಞಾನವನ್ನು ಇದು ಹೊಂದಿದೆ. ಅಭಯ್ ಸೋನಾರ್ ವ್ಯವಸ್ಥೆಯು ಧ್ವನಿ ತರಂಗಗಳನ್ನು ಬಳಸಿ ಜಲಾಂತರ್ಗಾಮಿಗಳ ಇರುವಿಕೆಯನ್ನು ಗುರುತಿಸುತ್ತದೆ. ಸಮುದ್ರದ ಮೇಲ್ಮೈಯಲ್ಲಿ ಯುದ್ಧ ಮತ್ತು ಆತ್ಮರಕ್ಷಣೆಗಾಗಿ 30 ಮಿಲಿಮೀಟರ್ ನೇವೇಲ್ ಸರ್ಫೇಸ್ ಗನ್ ಅಳವಡಿಸಲಾಗಿದೆ. ಮಹಾರಾಷ್ಟ್ರದ ಮಾಲ್ವನ್ ಸಮೀಪದ ಸಿಂಧುದುರ್ಗ ಕೋಟೆ ಶಿವಾಜಿಯ ಮರಾಠ ನೌಕಾಪಡೆಯ ಪ್ರಮುಖ ಕೇಂದ್ರವಾಗಿದ್ದ ಕಾರಣ ಈ ನೌಕೆಗೆ ಮಾಲ್ವನ್ ಎಂದು ಹೆಸರಿಸಲಾಗಿದೆ. ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ. ಪಿ. ಸಿಂಗ್ ಅವರ ಸಮ್ಮುಖದಲ್ಲಿ ಈ ನೌಕೆಗೆ ಚಾಲನೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 22, 2026 02:53 PM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More