ಕಾರವಾರದಲ್ಲಿ INS ಸಮರ್ಥಕ್ ಲೋಕಾರ್ಪಣೆ: ದೇಶದ ಕಡಲ ಭದ್ರತೆಗೆ ಹೊಸ ಶಕ್ತಿ

Edited By:

Updated on: Oct 16, 2026 | 2:16 PM

ಭಾರತೀಯ ನೌಕಾಪಡೆಗೆ ಐಎನ್ಎಸ್ ಸಮರ್ಥಕ್ ಯುದ್ಧನೌಕೆ ಸೇರ್ಪಡೆಯಾಗಿದೆ. ಕಾರವಾರದ ಕದಂಬ ನೌಕಾನೆಲೆಯಲ್ಲಿ ಲೋಕಾರ್ಪಣೆಗೊಂಡ ಈ ನೌಕೆಯನ್ನು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಲಾರ್ಸನ್ ಅಂಡ್ ಟ್ಯೂಬ್ರೊ ನಿರ್ಮಿಸಿದೆ. ಕಣ್ಗಾವಲು, ಗಸ್ತು ಕಾರ್ಯಾಚರಣೆ, ಶಸ್ತ್ರಾಸ್ತ್ರ ಪರೀಕ್ಷೆ, ಮಾನವೀಯ ನೆರವು ಮಿಷನ್‌ಗಳಿಗೆ ಇದು ಬೆಂಬಲ ನೀಡಲಿದೆ. ದೇಶದ ರಕ್ಷಣಾ ಸ್ವಾವಲಂಬನೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಕಾರವಾರ, ಅ.16: ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಐಎನ್ಎಸ್ ಸಮರ್ಥಕ್ ಯುದ್ಧನೌಕೆ ಇಂದು ಕಾರವಾರದ ಕದಂಬ ನೌಕಾನೆಲೆಯಲ್ಲಿ ಲೋಕಾರ್ಪಣೆಗೊಂಡಿದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಲಾರ್ಸನ್ ಅಂಡ್ ಟ್ಯೂಬ್ರೊ (L&T) ಸಂಸ್ಥೆಯು ಈ ನೌಕೆಯನ್ನು ನಿರ್ಮಿಸಿದೆ. ಇದು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳುತ್ತಿರುವ ನಾಲ್ಕು ಬಹು-ಉದ್ದೇಶದ ನೌಕೆಗಳ ಪೈಕಿ ಮೊದಲನೆಯದಾಗಿದೆ. ಇದರ ಸೇರ್ಪಡೆಯು ದೇಶದ ರಕ್ಷಣಾ ಸ್ವಾವಲಂಬನೆಯ ಪ್ರಯತ್ನದಲ್ಲಿ ಒಂದು ಮಹತ್ವದ ಮೈಲಿಗಲ್ಲು ಎನಿಸಿದೆ. ಐಎನ್ಎಸ್ ಸಮರ್ಥಕ್ ಅನ್ನು ಸಮುದ್ರದಲ್ಲಿ ಕಣ್ಗಾವಲು, ಗಸ್ತು ಕಾರ್ಯಾಚರಣೆ, ಕಡಿಮೆ ತೀವ್ರತೆಯ ಸಮುದ್ರ ಕಾರ್ಯಾಚರಣೆಗಳು, ಗುರಿ ನಿಯೋಜನೆ ಮತ್ತು ವಿವಿಧ ವ್ಯವಸ್ಥೆಗಳ ಪರೀಕ್ಷೆಗಾಗಿ ವಿನ್ಯಾಸಗೊಳಿಸಲಾಗಿದೆ. ಸುಮಾರು 100 ಮೀಟರ್‌ಗಿಂತಲೂ ಹೆಚ್ಚು ಉದ್ದ ಮತ್ತು 5000 ಟನ್‌ಗಳಷ್ಟು ತೂಕವನ್ನು ಹೊಂದಿರುವ ಈ ನೌಕೆಯು 7200 ನಾಟಿಕಲ್ ಮೈಲಿಗಳಷ್ಟು ದೂರ ಕ್ರಮಿಸುವ ಸಾಮರ್ಥ್ಯ ಹೊಂದಿದೆ. ಇದು ಪ್ರಮುಖ ಸಮರ ನೌಕೆಗಳನ್ನು ಅವುಗಳ ಮುಖ್ಯ ಕಾರ್ಯಾಚರಣೆಗಳಿಗೆ ಬಳಸಲು ಹೆಚ್ಚಿನ ಅವಕಾಶವನ್ನು ಒದಗಿಸುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More