AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ

ದಿಲೀಪ್​, ಚೌಡಹಳ್ಳಿ
| Edited By: |

Updated on: Apr 14, 2026 | 11:29 AM

Share

ಆದಿಚುಂಚನಗಿರಿಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ 10 ವರ್ಷಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ಕ್ಕೆ ಉದ್ಘಾಟಿಸಲಿದ್ದಾರೆ. ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿ ನಿರ್ಮಿಸಿರುವ ಈ ಮಂದಿರ ಚಾಲುಕ್ಯ, ಹೊಯ್ಸಳ, ಚೋಳ ಮತ್ತು ಗಂಗರ ಶಿಲ್ಪಕಲೆಗಳ ಸಮಾಗಮವಾಗಿದೆ. ಇದು ಹಲವು ವಿಶೇಷತೆಗಳಿಂದ ಕೂಡಿದ್ದು, ವಿಡಿಯೋ ಇಲ್ಲಿದೆ.

ಮಂಡ್ಯ, ಏಪ್ರಿಲ್ 14: ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಉದ್ಘಾಟಿಸಲಿದ್ದಾರೆ. ಕಳೆದ 10 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಈ ಮಂದಿರ, ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಈ ಮಂದಿರವು ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿದೆ. ಮಂದಿರದ ನಿರ್ಮಾಣವು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಕನಸಾಗಿತ್ತು. ಮಂದಿರವು ಹೊಯ್ಸಳ, ಚಾಲುಕ್ಯ, ಚೋಳ ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮವನ್ನು ಹೊಂದಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಿಸಿರುವ ಈ ಮಂದಿರ ವಾಸ್ತುಶಿಲ್ಪದ ಒಂದು ಅದ್ಭುತವಾಗಿದೆ. ಇದರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ಮೋದಿ ಅವರ ಆಗಮನಕ್ಕಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಂದಿರ ಹೇಗಿದೆ ಎಂಬುದನ್ನು ಈ ವಿಡಿಯೋದಲ್ಲಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More