ಸಿದ್ದರಾಮಯ್ಯ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ಬೇಕಾಬಿಟ್ಟಿ ಕಾಮೆಂಟ್ ಮಾಡೋದನ್ನು ನಿಲ್ಲಿಸಲಿ: ಎನ್ ಚೆಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 22, 2023 | 7:49 PM

ಸಿದ್ದರಾಮಯ್ಯ ರಾಜ್ಯದ 100 ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ತಮ್ಮ ಕೆಲಸ ನೋಡಿಕೊಳ್ಳುವುದು ಒಳಿತು ಎಂದು ಚೆಲುವರಾಯಸ್ವಾಮಿ ಹೇಳಿದರು.

ಬೆಂಗಳೂರು: ಒಂದು ಜಮಾನದಲ್ಲಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಎನ್ ಚೆಲುವರಾಯಸ್ವಾಮಿ (N Cheluvarayaswamy) ಗಳಸ್ಯ ಕಂಠಸ್ಯ ಆಗಿದ್ದವರು. ಚೆಲುವರಾಯಸ್ವಾಮಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಬಳಿಕ ಇವರಿಬ್ಬರ ನಡುವಿನ ಸಂಬಂಧ ಎಣ್ಣೆ ಸೀಗೆಕಾಯಿಯಂತಾಗಿದೆ. ಕುಮಾರಸ್ವಾಮಿಯವರು ಸಿದ್ದರಾಮಯ್ಯ (Siddaramaiah) ಬಗ್ಗೆ ಕಾಮೆಂಟ್ ಮಾಡುತ್ತಲೇ ಇರುತ್ತಾರೆ. ಸಿದ್ದರಾಮಯ್ಯಗೆ ಕ್ಷೇತ್ರ ಸಿಗುತ್ತಿಲ್ಲ ಅಂತ ಅವರು ಹೇಳಿದ್ದಕ್ಕೆ ಕೋಪಗೊಂಡಿರುವ ಚೆಲುವರಾಯಸ್ವಾಮಿ, ಸಿದ್ದರಾಮಯ್ಯನವರಿಗೆ 4-5 ಕಡೆಗಳಿಂದ ಸ್ಪರ್ಧಿಸುವಂತೆ ಆಹ್ವಾನಗಳು ಬರುತ್ತಿರುವುದರಿಂದ ಯೋಚನೆ ಮಾಡಿ ಕ್ಷೇತ್ರ ಆರಿಸಿಕೊಳ್ಳಿ ಎಂದು ಹೈಕಮಾಂಡ್ ಹೇಳಿದೆ, ಕೋಲಾರ ಬೇಡ ಅಂತ ಹೇಳಿಲ್ಲ ಎಂದರು. ಸಿದ್ದರಾಮಯ್ಯ ಕೋಲಾರ, ಬಾದಾಮಿ ಮಾತ್ರವಲ್ಲ ರಾಜ್ಯದ 100 ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ತಮ್ಮ ಕೆಲಸ ನೋಡಿಕೊಳ್ಳುವುದು ಒಳಿತು ಎಂದು ಚೆಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 22, 2023 07:49 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.