ಬೇಲೂರು ಗಣೇಶಮೂರ್ತಿಗೆ ಚಪ್ಪಲಿ ಹಾರ ಹಾಕಿದ್ಯಾರು? ಇಲ್ಲಿದೆ CCTV ದೃಶ್ಯ
ಬೇಲೂರಿನ ಪುರಸಭೆ ಆವರಣದಲ್ಲಿರುವ ವಿದ್ಯಾಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಸಿಡಿದೆದ್ದಿದ್ದು, ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ನಡೆಸಿದ ತನಿಖೆಯಲ್ಲಿ, ಈ ಕೃತ್ಯವನ್ನು ಮಹಿಳೆಯೊಬ್ಬರು ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ.
ಹಾಸನ (ಸೆಪ್ಟೆಂಬರ್ 21): ಬೇಲೂರಿನ ಪುರಸಭೆ ಆವರಣದಲ್ಲಿರುವ ವಿದ್ಯಾಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಸಿಡಿದೆದ್ದಿದ್ದು, ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ನಡೆಸಿದ ತನಿಖೆಯಲ್ಲಿ, ಈ ಕೃತ್ಯವನ್ನು ಮಹಿಳೆಯೊಬ್ಬರು ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೌದು.. ಮಹಿಳೆಯೋರ್ವಳು ಮುಖ ಮುಚ್ಚಿಕೊಂಡು ಚಪ್ಪಲಿ ಹಾಕಿಕೊಂಡು ದೇವಸ್ಥಾನ ಪ್ರವೇಶಿಸಿದ್ದಾಳೆ. ಆದ್ರೆ, ದೇವಸ್ಥಾನದಿಂದ ವಾಪಸ್ ತೆರಳುವ ವೇಳೆ ಮಹಿಳೆ ಕಾಲಿನಲ್ಲಿ ಚಪ್ಪಲಿ ಇಲ್ಲ. ಹೀಗಾಗಿ ಇದೇ ಮಹಿಳೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
