ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಯುವ ಜೋಡಿ!
ಪೋಷಕರ ವಿರೋಧದ ನಡುವೆಯೂ ಸಕಲೇಶಪುರದ ಪ್ರೇಮಿಗಳಾದ ಮನೋಜ್ ಮತ್ತು ಪ್ರೀತಿ ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾಗಿದ್ದಾರೆ. ರಕ್ಷಣೆ ಕೋರಿ ನವದಂಪತಿ ಮನವಿ ಮಾಡಿದ್ದಾರೆ. ಅಂಬೇಡ್ಕರ್ ಪ್ರತಿಮೆ ಎದುರಿನ ವಿವಾಹದ ವಿಡಿಯೋ ಈಗ ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಹಾಸನ, ಮೇ 16: ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ ಮತ್ತು ಅಂತರ್ಜಾತಿ ವಿವಾಹಕ್ಕೆ ಕುಟುಂಬಸ್ಥರು ಒಪ್ಪದ ಕಾರಣ, ಈ ಯುವ ಜೋಡಿ ಸಂಘಟನೆಯ ಮುಖಂಡರ ಸಮ್ಮುಖದಲ್ಲಿ ಸಂವಿಧಾನ ಶಿಲ್ಪಿಯ ಸಾಕ್ಷಿಯಾಗಿ ಹಾರ ಬದಲಿಸಿಕೊಂಡಿದ್ದಾರೆ. ತಮಗೆ ಯಾರೂ ತೊಂದರೆ ಕೊಡಬಾರದು ಎಂದು ಮನವಿ ಮಾಡಿಕೊಂಡಿರುವ ಈ ನವದಂಪತಿಯ ವಿವಾಹದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

