Assembly Polls: ಚುನಾವಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ ಸ್ಪೋಟಗೊಂಡು ಪಕ್ಷ ಹೇಳಹೆಸರಿಲ್ಲದಂತಾಗುತ್ತದೆ: ಕೆಎಸ್ ಈಶ್ವರಪ್ಪ

Assembly Polls: ಚುನಾವಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ ಸ್ಪೋಟಗೊಂಡು ಪಕ್ಷ ಹೇಳಹೆಸರಿಲ್ಲದಂತಾಗುತ್ತದೆ: ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 17, 2023 | 4:06 PM

ಕಡೂರಿಂದ ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಈಶ್ವರಪ್ಪ, ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ, ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸವಿದೆ, ತಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಹೇಳಿದರು.

ಚಿಕ್ಕಮಗಳೂರು: ಇಂದು ಜಿಲ್ಲೆಯ ಕಡೂರಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya Sankalp Yatre) ಭಾಗವಹಿಸಿದ ಬೆಜೆಪಿ ಶಾಸಕ ಕೆಎಸ್ ಈಶ್ವರಪ್ಪ (KS Eshwarappa), ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ (Congress Party) ಧೂಳೀಪಟವಾಗಲಿದೆ ಎಂದು ಹೇಳಿದರು. ಕಡೂರಿಂದ ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಈಶ್ವರಪ್ಪ, ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ, ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸವಿದೆ, ತಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಬಗ್ಗೆಯೂ ಮಾತಾಡಿದ ಅವರು ಚುನಾವಣೆಯ ನಂತರ ಅಲ್ಲಿ ನಾಯಕರ ನಡುವಿನ ಅಸಮಾಧಾನ, ಬೇಗುದಿ ಸ್ಪೋಟಗೊಳ್ಳಲಿದೆ ಮತ್ತು ಬೇರೆ ರಾಜ್ಯಗಳಲ್ಲಿ ಆ ಪಕ್ಷಕ್ಕೆ ಆಗಿರುವ ಗತಿಯೇ ಕರ್ನಾಟಕದಲ್ಲೂ ಆಗಲಿದೆ ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Mar 17, 2023 04:05 PM